ಬೆಂಗಳೂರು;ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನವದೆಹಲಿಯಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿದೆ. ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ದಿನಾಲೂ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಇದರಿಂದ ರಾಜ್ಯಕ್ಕೆ ಬಿಗ್ ಶಾಕ್ ಎದುರಾಗಿದೆ. 15 ದಿನ ಕಾಲ ದಿನಾಲೂ 13 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ತಮಿಳುನಾಡು ಮನವಿ ಮಾಡಿತ್ತು. ಮಳೆಯಾಗುತ್ತಿದ್ದರೂ ಕರ್ನಾಟಕ ನೀರು ಬಿಡುತ್ತಿಲ್ಲ. ಅಲ್ಲದೆ, CWMA ಅವರ ನಿಯಮ ಪಾಲಿಸುತ್ತಿಲ್ಲ ಎಂದು ಸಭೆಯಲ್ಲಿ ದೂರಿತ್ತು.ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಬಿಡುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿತ್ತು.ಇದೀಗ ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ.