25.8 C
Bengaluru
Friday, March 1, 2024

ಸಾವಯವ ಅಂತಾರಾಷ್ಟ್ರೀಯ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ಉದ್ಘಾಟಿಸಿದ ಸಿಎಂ

#Organic International # Cereal Trade Fair # inaugurated # CM
ಬೆಂಗಳೂರು; ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ (Millets) ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.ನಿತ್ಯ ಆಹಾರ ಪದ್ಧತಿಯಲ್ಲಿ ಸಿರಿಧ್ಯಾನಕ್ಕೆ ಒತ್ತು ನೀಡುವಂತೆ ಕರೆ ನೀಡಿದರು.ರಫ್ತು ಪ್ರಮಾಣ ಹೆಚ್ಚಿಸುವ ಗುರಿ ಹಿನ್ನೆಲೆ ಕೃಷಿ ಇಲಾಖೆಯು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಸಂಸ್ಥೆಯ ಸಹಯೋಗದೊಂದಿಗೆ ನಗರದ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ’ಸಿರಿಧಾನ್ಯ ಮತ್ತು ಸಾವಯುವ-2024’ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.ಕೃಷಿ ಸಚಿವ ಚಲುವರಾಯಸ್ವಾಮಿ ಕರ್ನಾಟಕದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಪ್ರದರ್ಶನಕ್ಕಾಗಿ ಪ್ರತ್ಯೇಕವಾಗಿ 100 ಮಳಿಗೆಗಳನ್ನು ಮೀಸಲಿಟ್ಟಿದ್ದೇವೆ.

ಬಿಸ್‌ನೆಸ್ ಟು ಬಿಸ್‌ನೆಸ್ (ಬಿಟುಬಿ) ಸಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ಸಮ್ಮೇಳನ, ರೈತರ ಕಾರ್ಯಾಗಾರಗಳನ್ನು ಆಯೋಜಿಸಿದ್ದೇವೆ.ಎಂದು ಹೇಳಿದರು. ಮೇಳಕ್ಕೆ ಒಡಿಶಾ, ಕೇರಳ, ಅರಬ್‌, ಜಪಾನ್‌ ದೇಶಗಳಿಂದಲೂ ಉದ್ಯಮಿಗಳು ಮೇಳಕ್ಕೆ ಆಗಮಿಸಿದ್ದಾರೆ. ಸರಕಾರಿ, ಖಾಸಗಿ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನಕ್ಕಾಗಿ 250ಕ್ಕೂ ಹೆಚ್ಚಿನ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img