Revenue Facts

ನಮ್ಮ ರಸ್ತೆ ಕಾರ್ಯಗಾರ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ನಮ್ಮ ರಸ್ತೆ ಕಾರ್ಯಗಾರ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು : ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿ ನಮ್ಮ ರಸ್ತೆ ಪ್ರದರ್ಶನ ಕಾರ್ಯಾಗಾರಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉದ್ಘಾಟಿಸಿದರು.ನಗರದಲ್ಲಿ ಸುರಕ್ಷಿತ ರಸ್ತೆಗಳನ್ನು ಸಿದ್ಧಪಡಿಸಲು ಸಮ್ಮೇಳನದಲ್ಲಿ ಅನುಭವಗಳನ್ನು ಹಂಚಿಕೊಳ್ಳಲು ನಾಗರಿಕರು ಮತ್ತು ನಾಗರಿಕ ಸಂಸ್ಥೆಗಳು ವಿನ್ಯಾಸಕರು ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಹೇಳಿದರು. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಸಮಾವೇಶದಲ್ಲಿ ಕಂಪನಿಯ ಇಂಜಿನಿಯರ್‌ಗಳೊಂದಿಗೆ ತರಬೇತಿ ಕಾರ್ಯಕ್ರಮವೂ ನಡೆಯಲಿದೆ.

ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆಯಾ…?

ಬಿಬಿಎಂಪಿ, ಅದರ ಜ್ಞಾನ ಪಾಲುದಾರ ವಿಶ್ವ ಸಂಪನ್ಮೂಲ ಸಂಸ್ಥೆ ಮತ್ತು ಸುರಕ್ಷಿತ ರಸ್ತೆಗಳಲ್ಲಿ ಎರಡು ದಿನಗಳ ಕಾರ್ಯಕ್ರಮವನ್ನು ನಡೆಸುತ್ತಿರುವ ಇತರ ಏಜೆನ್ಸಿಗಳು ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ನಗರದಲ್ಲಿ ಬಸ್ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಘಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿವೆ. ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

ಇಂದಿರಾ ಕ್ಯಾಟೀನ್ ನಲ್ಲಿ ಹೊಸ ಮೆನು ….!

ಇಂದಿರಾ ಕ್ಯಾಟೀನ್ ನಲ್ಲಿ ಜನವರಿ ೨೬ ರೊಳಗೆ ಹೊಸದಾಗಿ ಮೆನು ಸೇರ್ಪಡೆಯಾವುವ ಸಾಧ್ಯತೆ ಇದೆ. ಚಪಾತಿ ಮತ್ತು ರಾಗಿ ಮುದ್ದೆಯನ್ನು ಕೊಡಬಹುದು, ಆದರೆ ಇದ್ದಕ್ಕೆ ತಗುಲುವ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳುತ್ತದೆ. ಈಗ ಯಾವ ಬೆಲೆಗೆ ದೊರೆಯುತ್ತಿತ್ತೊ ಅದೇ ಬೆಲೆಗೆ ಸಾರ್ವಜನಿಕರಿಗೆ ಸಿಗುತ್ತದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಚೈತನ್ಯ, ರೆವೆನ್ಯೂ ಫ್ಯಾಕ್ಟ್ ನ್ಯೂಸ್, ಬೆಂಗಳೂರು

Exit mobile version