28.2 C
Bengaluru
Wednesday, July 3, 2024

ಪಾಂಡವಪುರ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ!

ಪಾಂಡವಪುರ ಜೂನ್ 23: ಸಾಮಾನ್ಯವಾಗಿ ಲಂಚ ಪಡೆಯದೆ ಸರ್ಕಾರಿ ಕಛೇರಿಗಳಲ್ಲಿ ಕೆಲಸ ನಡೆಯದು ಎಂಬ ವದಂತಿ ಇದೆ! ಅದಕ್ಕೆ ಪುಷ್ಟಿ ಕೊಡುವಂತೆ ಸಾಕಷ್ಟು ಲೋಕಾಯುಕ್ತ ದಾಳಿಗಳನ್ನುನಾವು ಪ್ರತಿದಿನ ನೋಡುತ್ತಿರುತ್ತೇವೆ ಅದರಂತೆಯೇ,ಗ್ರಾಮ ಲೆಕ್ಕಾಧಿಕಾರಿಗೆ ಸ್ಥಳ ನಿಯೋಜನೆಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಪಾಂಡವಪುರ ತಹಸೀಲ್ದಾರ್ ಕೆ.ಸಿ.ಸೌಮ್ಯಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ನೇರವಾಗಿ ಗುರುವಾರ ಸಿಕ್ಕಿಬಿದ್ದಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಯ ಸ್ಥಳ ನಿಯೋಜನೆಗೆ ಸಂಬಂಧಿಸಿದಂತೆ 40 ಸಾವಿರ ಹಣಕ್ಕೆ ಬೇಡಿಕೆ ಇಟ್ಟ ತಹಸೀಲ್ದಾರ್ ಕೆ.ಸಿ.ಸೌಮ್ಯಾ ಅವರು ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ತಹಸೀಲ್ದಾರ್ ಸ್ಥಳ ನಿಯೋಜನೆಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗ್ರಾಮ ಲೆಕ್ಕಾಧಿಕಾರಿ ಬುಧವಾರ ಲೋಕಾಯುಕ್ತರಿಗೆ ನೀಡಿದ್ದ ದೂರಿನ ಮೇರೆಗೆ ಗುರುವಾರ ಬೆಳಗಿನಿಂದಲೂ ಮಾರು ವೇಷದಲ್ಲಿತಾಲೂಕು ಕಚೇರಿಯಲ್ಲಿ ಸುತ್ತಾಡಿದ ಲೋಕಾಯುಕ್ತ ಪೊಲೀಸರು ಗುರುವಾರ ರಾತ್ರಿ ದೂರು ನೀಡಿದ ವ್ಯಕ್ತಿ ಹಣ ನೀಡತ್ತಿದ್ದ ವೇಳೆ ಏಕಾಏಕಿ ದಾಳಿ‌ನಡಿಸಿದ್ದಾರೆ.

ದೊಡ್ಡಬೋಗನಹಳ್ಳಿ ಮತ್ತು ಗುಮ್ಮನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮರಿಸ್ವಾಮಿ ಅವರನ್ನು ಬೇರೆಡೆಗೆ ನಿಯೋಜಿಸಲು 40ಸಾವಿರಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ವೇಳೆ ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರನ್ನು ಲೋಕಾಯುಕ್ತರು ಬಲೆಗೆ ಕೆಡವಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ಮಾಲು ಸಮೇತ ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರನ್ನು ವಶಕ್ಕೆ ಪಡೆದರು.ದಾಳಿಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ, ಪ್ರಕಾಶ್, ಲೋಕೇಶ್ ಗೌಡ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img