ಕರ್ನಾಟಕ ರಾಜ್ಯದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರೈತರ ನೆರವಿಗೆ ಧಾವಿಸಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಂಡ್ಯ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ.
ಶೂನ್ಯವೇಳೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಬಿಚ್ಚಿಟ್ಟ ಸಂಸದೆ ಸುಮಲತಾ ಅಂಬರೀಶ್
ಲೋಕಸಭೆ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಪ್ರಸ್ತಾಪಿಸಿದರು.2023ರಲ್ಲಿ ಜಾಗತಿಕವಾಗಿ ಅತ್ಯಂತ ಹೆಚ್ಚು ಉಷ್ಣಾಂಶ ವರ್ಷವಾಗಿದೆ. ಆದ್ದರಿಂದಾಗಿ ನಮ್ಮ ರಾಜ್ಯದಲ್ಲಿಯೂ ಉಷ್ಣಾಂಶ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 236ರ ಪೈಕಿ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿದ್ದು, ಅಂದಾಜು 30 ಸಾವಿರ ಕೋಟಿ ನಷ್ಟವಾಗಿದೆ ಎಂದು ಪ್ರಧಾನಿಗಳ ಗಮನಕ್ಕೆ ತಂದರು.
ಮಂಡ್ಯದ ಎಲ್ಲಾ ತಾಲ್ಲೂಕುಗಳು ಬರ ಪೀಡಿತವಾಗಿವೆ- ಸುಮಲತಾ
ಇನ್ನು ನನ್ನ ಮತಕ್ಷೇತ್ರ ಮಂಡ್ಯದ ಎಲ್ಲಾ ತಾಲೂಕುಗಳು ಬರ ಪೀಡಿತವಾಗಿವೆ. ರೈತರು ಸಂಕಷ್ಟದಲ್ಲಿದ್ದಾರೆ, 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಕರ್ನಾಟದ ರೈತರ ನೆರವಿಗೆ ಪ್ರಧಾನಿ ಮೋದಿ ಧಾವಿಸಬೇಕು. ರೈತರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಅಭಿಜಿತ್. ರೆವಿನ್ಯೂ ಫ್ಯಾಕ್ಟ್ ನ್ಯೂಸ್


