Revenue Facts

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ ಆರಂಭ

#Pay CS #chaluvarayaswami #CID

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸದ್ದುಮಾಡಿದ್ದ ಪೇ ಸಿಎಂ ಅಭಿಯಾನದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ‌ ವಿರುದ್ಧ ಪೇ ಸಿಎಸ್ ಅಭಿಯಾನ ಆರಂಭವಾಗಿದೆ.ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಗ್ರೂಪ್ ನಿಂದ ಇಂತಹ ಪೋಸ್ಟ್​ ಆಗಿದ್ದು, ನಮ್ಮಲ್ಲಿ ಪೇಟಿಎಂ ಕೂಡ ಲಭ್ಯವಿದೆ. ದಾರಾಳವಾಗಿ ಸ್ಕ್ಯಾನ್ ಮಾಡಿ ಲಂಚ ಪಾವತಿ ಮಾಡಿ. ಧನ್ಯವಾದಗಳು, ಇಂತಿ ನಿಮ್ಮ ಭ್ರಷ್ಟ ಚೆಲುವರಾಯಸ್ವಾಮಿ ಅಲಿಯಾಸ್ ಲಂಚ ಸ್ವಾಮಿ ಎಂದು ಟ್ಯಾಗ್ ಲೈನ್ ಹಾಕಲಾಗಿದೆ.

ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿತ್ತು.ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡು, ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯ ಜಟಾಪಟಿ ಸೃಷ್ಟಿಸಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬೀಳಲು ರಣತಂತ್ರ ರೂಪಿಸುತ್ತಿದೆ. ಅದರ ಮೊದಲ ಭಾಗವಾಗಿ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್ ಅಭಿಯಾನ ಶುರು ಮಾಡುವಂತಿದ್ದು, ಅದರ ಮಾದರಿ ಪೋಸ್ಟ್ ಇದೀಗ ಬಹಿರಂಗವಾಗಿದೆ.

Exit mobile version