ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರಕಾರ ಭರ್ಜರಿ ರಿಯಾಯಿತಿ ಘೋಷಿಸಿದೆ. ಶೇಕಡ 50ರ ತನಕ ರಿಯಾಯಿತಿಯನ್ನು ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದೆ.ದಂಡ ಕಟ್ಟದೆ ಬಾಕಿ ಇಳಿಸಿಕೊಂಡಿರುವವರು ಮತ್ತು ಪ್ರಕರಣ ಕೋರ್ಟ್ ನಲ್ಲಿ ಇದ್ದರೆ ಅಂತಹವರು ಇದೇ ಫೆಬ್ರವರಿ 11ರೊಳಗೆ ದಂಡ ಪಾವತಿಸಿದರೆ ಶೇಕಡಾ 50ರಷ್ಟು ರಿಯಾಯ್ತಿ ಸಿಗಲಿದೆ.ಇನ್ನು ಫೆಬ್ರವರಿ 11ರೊಳಗೆ ಕಟ್ಟಲು ಸಾಧ್ಯವಾಗದಿದ್ದರೆ ಫೆಬ್ರವರಿ 11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕಾಗುತ್ತದೆ. ಈ ಹಿಂದೆ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರಾದ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಬಗ್ಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಆದೇಶವು ಫೆ 11ರೊಳಗೆ ಟ್ರಾಫಿಕ್ ಫೈನ್ ಕಟ್ಟುವವರಿಗೆ ಮಾತ್ರ ಅನ್ವಯವಾಗಲಿದೆ. ಇದು ಸೀಮತ ಅವಧಿಯಲ್ಲಿ ನಡೆಯಲಿದೆ.

ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇ. 50ರಷ್ಟು ರಿಯಾಯಿತಿ; ಕಟ್ಟಲು ಅಂತಿಮ ದಿನಾಂಕ ಫೆಬ್ರವರಿ 11
by RF Desk