21 C
Bengaluru
Tuesday, December 3, 2024

‘ಗುತ್ತಿಗೆದಾರರ ಹಣ ಹಂತ ಹಂತವಾಗಿ ಪಾವತಿ;ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಸಣ್ಣ ಗುತ್ತಿಗೆದಾರರ ಅನುಕೂಲಕ್ಕೆ ₹4 ಸಾವಿರ ಕೋಟಿ ಕಾಮಗಾರಿಯನ್ನು(workman) ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಮಾತನಾಡಿ, ಬಾಕಿ ಮೊತ್ತ ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ. ಕೇಂದ್ರ BJP ಸರ್ಕಾರದ ಅಸಹಕಾರದ ಹೊರತಾಗಿಯೂ ಗುತ್ತಿಗೆದಾರರ ಅಷ್ಟೂ ಹಣ ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದಿದ್ದಾರೆ.ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟು ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ ಎಲ್‌ಓಸಿಗಾಗಿ(LOC) ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು.ರಾಜ್ಯ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ನಗರದ ಅರಮನೆ ಆವರಣದಲ್ಲಿ ಏರ್ಪಡಿಸಿದ್ದ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಬೋಸರಾಜು, ಸತೀಶ್ ಜಾರಕಿಹೊಳಿ, ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, ಹಲವು ಗಣ್ಯರು ಉಪಸ್ಥಿತರಿದ್ದರು.
ರಮನೆ ಆವರಣದಲ್ಲಿ ಏರ್ಪಡಿಸಿದ್ದ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಬೋಸರಾಜು, ಸತೀಶ್ ಜಾರಕಿಹೊಳಿ, ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, ಹಲವು ಗಣ್ಯರು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img