#Petition against # Article 370 #Supreme Court #important judgment
ನವದೆಹಲಿ: 370ನೇ ವಿಧಿರದ್ದು ಎತ್ತಿಹಿಡಿದ ಸುಪ್ರೀಂಕೋರ್ಟ್ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಕುರಿತಂತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ 23 ಅರ್ಜಿಗಳ ಸಂಬಂಧ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು ಎಂದರು .ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ. ರಾಷ್ಟ್ರಪತಿ ಕೈಗೊಳ್ಳುವ ನಿರ್ಧಾರಗಳು ನ್ಯಾಯಾಂಗದ ಪರಾಮರ್ಶಗೆ ಒಳಪಡಲಿದೆ ಎಂದು ಹೇಳಿದರು.ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ .ಆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕುರಿತು ಇದ್ದ ಎಲ್ಲಾ ಗೊಂದಲಗಳಿಗೆ ಬಹುತೇಕ ತೆರೆ ಬಿದ್ದಂತಾಗಿದೆ.ಬಿಜೆಪಿ ಸರ್ಕಾರವು 2ನೇ ಬಾರಿಗೆ ಅಧಿಕಾರಕ್ಕೆ ಬಂದಾಗ 2019ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು.