Revenue Facts

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಸಿಸಿಬಿ ಬಂಧಿಸಿದೆ.ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್ ರಬ್ಬಾನಿಯನ್ನು ಬಂಧಿಸಲಾಗಿದ್ದು, ಈ ತಂಡದ ನಾಯಕ ಜುನೈದ್ ನಾಪತ್ತೆಯಾಗಿದ್ದಾನೆ. ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ನಿವಾಸಿಗಳು. ಜನ ಸಂದಣಿ ಇರುವ ಪ್ರದೇಶದಲ್ಲಿ ಬ್ಲ್ಯಾಸ್ಟ್ ನಡೆಸಲು ಇವರು ತಯಾರಿ ನಡೆಸಿದ್ದರು.ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದೆ.ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದು ಜನಸಂದಣಿ ಇರುವ ಪ್ರದೇಶದಲ್ಲಿ ಬ್ಲ್ಯಾಸ್ಟ್ ನಡೆಸಲು ಇವರು ತಯಾರಿ ನಡೆಸಿದ್ದರು.

ಶಂಕಿತರ ಮೇಲೆ ಹೆಬ್ಬಾಳ ಠಾಣೆಯಲ್ಲಿ ಸಿಸಿಬಿ ಪ್ರಕರಣ ದಾಖಲಿಸಿದೆ. ವಶಕ್ಕೆ ಪಡೆದ ಶಂಕಿತರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆ ನಡೆಸುತ್ತಿದೆ.ಎರಡು ಪಿಸ್ತೂಲ್, 42 ಜೀವಂತ ಗುಂಡುಗಳು, 2 ಸ್ಯಾಟಲೈಟ್ ಫೋನ್ ಮಾದರಿಯ ವಾಕಿಟಾಕಿ, ಮೊಬೈಲ್ ಫೋನ್, ವಿವಿಧ ಕಂಪನಿ ಸಿಮ್‌ಗಳು, ಲ್ಯಾಪ್ ಟಾಪ್ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಇವೆಲ್ಲವುಗಳನ್ನು ಬಂಧಿತರಿಂದ ವಶ ಪಡಿಸಿಕೊಳ್ಳಲಾಗಿದೆ.ಬೆಂಗಳೂರಲ್ಲಿ ದೊಡ್ಡ ಮಟ್ಟದ ಸ್ಫೋಟ ನಡೆಸಲು ಶಂಕಿತರ ಟೀಂ ಎಲ್ಲ ಪ್ಲ್ಯಾನ್‌ ಮಾಡಿತ್ತು. ಸುಮಾರು ಹತ್ತಕ್ಕೂ ಹೆಚ್ಚು ಜನರಿಂದ ಬೃಹತ್ ಸ್ಫೋಟಕ ಮಾಡೋ ಪ್ಲಾನ್ ನಡೀತಿದ್ದ ಮಾಹಿತಿ ಕೇಳಿಬಂದಿದೆ. ಬೆಂಗಳೂರು ಸಿಸಿಬಿ ಟೀಂಗೆ ಮಾಹಿತಿ ಸಿಕ್ಕ ಕೂಡಲೇ ಅಲರ್ಟ್ ಆಗಿದ್ದ ಟೀಂ ಶಂಕಿತರ ಲೊಕೇಶನ್ ಟ್ರೇಸ್ ಮಾಡಿದ್ರು. ಈ ಹಿನ್ನೆಲೆ ಬೃಹತ್ ಸ್ಫೋಟ ಪ್ಲ್ಯಾನ್‌ಗೆ ತಡೆ ಬಿದ್ದಿದೆ.

Exit mobile version