#PM Narendra Modi #inaugurated Boeing’s #India Engineering # Technology
ಬೆಂಗಳೂರು ಏರ್‌ಪೋರ್ಟ್ ಸಮೀಪವಿರುವ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನಿರ್ಮಾಣವಾದ ಅತಿದೊಡ್ಡ ಬೋಯಿಂಗ್ ಸೌಲಭ್ಯವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ & ಟೆಕ್ನಾಲಜಿ ಸೆಂಟರ್ (BIETC) ಕ್ಯಾಂಪಸ್ ಅನ್ನು ₹1,600 ಕೋಟಿ ಹೂಡಿಕೆಯೊಂದಿಗೆ 43 ಎಕರೆಯಲ್ಲಿ ನಿರ್ಮಿಸಲಾಗಿದೆ. 1,600 ಕೋಟಿ ರೂ.ಗಳ ವೆಚ್ಚದಲ್ಲಿ 43 ಎಕರೆ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿದೊಡ್ಡ ಹೂಡಿಕೆಯಾಗಿದೆ. ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕ್ಯಾಂಪಸ್ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.ಏರ್ ಪೋರ್ಟ್ ನಲ್ಲಿ ಪ್ರಧಾನಿ ಮೋದಿಗೆ ಡಿಸಿಎಂ ಡಿಕೆಶಿ ಸ್ವಾಗತ ಕೋರಿದರೆ, ಕಾರ್ಯಕ್ರಮದ ವೇದಿಕೆ ಬಳಿ ಸಿಎಂ ಸಿದ್ದರಾಮಯ್ಯ ಸ್ವಾಗತ ಕೋರಿದರು.43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ.
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವುದರಿಂದ ಏರೋಸ್ಪೇಸ್ ಏಜೆನ್ಸಿಯ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ,ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದರು.ದೇಶಾದ್ಯಂತ ಹೆಚ್ಚು ಹೆಣ್ಣು ಮಕ್ಕಳು ವೈಮಾನಿಕ ವಲಯಕ್ಕೆ ಸೇರಲು ನೆರವಾಗುವ ಉದ್ದೇಶ ಹೊಂದಿರುವ ಬೋಯಿಂಗ್ ಸುಕನ್ಯಾ ಯೋಜನೆ. ಈ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪ್ರಮುಖ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕೌಶಲಗಳನ್ನು ಸಂಪಾದಿಸಲು ಅವಕಾಶ ಕಲ್ಪಿಸಲಿದೆ. ಹೆಣ್ಣುಮಕ್ಕಳನ್ನು ವೈಮಾನಿಕ ಉದ್ಯೋಗಗಳಿಗೆ ಸಿದ್ಧಗೊಳಿಸಲಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಸಿಲಿಕಾನ್ ಸಿಟಿಯನ್ನು ಹಾಡಿ ಹೊಗಳಿದ್ದಾರೆ. ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿ, ಬೆಂಗಳೂರು ನಾವೀನ್ಯತೆ ಮತ್ತು ಆಕಾಂಕ್ಷೆ ಸಂಪರ್ಕಿಸುವ ನಗರವಾಗಿದೆ. ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಬೆಂಗಳೂರು ಸಂಪರ್ಕಿಸುತ್ತದೆ ಎಂದು ಕೊಂಡಾಡಿದ್ದಾರೆ. ಲೋಕಾರ್ಪಣೆಗೊಂಡ ಬೋಯಿಂಗ್ ಕ್ಯಾಂಪಸ್ ಯುನೈಟೆಡ್ ಸ್ಟೇಟ್ಸ್‌ನ ಹೊರಗೆ ಅತಿ ದೊಡ್ಡದಾಗಿದೆ.