Revenue Facts

ಲಂಚ ಪಡೆಯುತ್ತಿದ್ದ ವೇಳೆಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು PSI

ಬೆಂಗಳೂರು: ಕೆಆರ್ ಪುರಂ ಆರಕ್ಷಕ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಗುರುವಾರ ಸಿಕ್ಕಿಬಿದ್ದಿದ್ದಾರೆ.ಬೆಂಗಳೂರಿನ ಕೆಆರ್ ಪುರಂ(KR puarm) ಆರಕ್ಷಕ ಠಾಣೆಯ ಇನ್ಸ್‌ಪೆಕ್ಟರ್‌ ಮತ್ತು PSI ಲಂಚ (bribe) ಪಡೆಯುತ್ತಿದ್ದ ವೇಳೆ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ,ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಜ್ರಮುನಿ ಮತ್ತು PSI ರಮ್ಯಾ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ. ಪೊಲೀಸರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್‌ (inspector) ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್‌ ರಮ್ಯ ಅವರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.ಆತನನ್ನು ತಮ್ಮ ವಶದಿಂದ ಬಿಡಲು ಐದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಲ್ಲಿ ಆಗಲೇ ಐವತ್ತು ಸಾವಿರ ರೂ. ಮೊದಲು ಪಡೆದುಕೊಂಡಿದ್ದರು. ಎರಡನೇ ಕಂತಾಗಿ ಒಂದು ಲಕ್ಷ ರೂ.ಗೆ ಬೇಡಿಕೆ (demand) ಇಟ್ಟಿದ್ದರು ಎನ್ನಲಾಗಿದೆ.

Exit mobile version