20.5 C
Bengaluru
Tuesday, July 9, 2024

ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್​ ಕೊಟ್ಟ ತುಮಕೂರು ಎಸ್ಪಿ

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇಲೆ ಓರ್ವ ಎಎಸ್ ‌ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.ಕಳ್ಳಂಬೆಳ್ಳ ಠಾಣೆಯ ಎಎಸ್ ‌ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.

ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ:-
ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ, ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ಲಾರಿಯಿಂದ 200, 300 ರೂಪಾಯಿ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

ಹಣ ವಸೂಲಿ ಸಾಬೀತು:-
ಹಣ ವಸೂಲಿ ಪ್ರಕರಣ ತಮ್ಮ ಗಮನಕ್ಕೆ ಬರುತ್ತಿದ್ದಂತೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್​ಪೆಕ್ಟರ್​ಗೆ ತುಮಕೂರು ಎಸ್ಪಿ ಸೂಚನೆ ನೀಡಿದ್ದರು. ವರದಿಯಲ್ಲಿ ಪೊಲೀಸರು ಹಣ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಎಎಸ್​ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ.

Related News

spot_img

Revenue Alerts

spot_img

News

spot_img