Revenue Facts

85 ವರ್ಷ ಮೇಲ್ಪಟ್ಟವರಿಗೆ ಮಾತ್ರ ಅಂಚೆ ಮತಪತ್ರ ಸೌಲಭ್ಯ

85 ವರ್ಷ ಮೇಲ್ಪಟ್ಟವರಿಗೆ ಮಾತ್ರ ಅಂಚೆ ಮತಪತ್ರ ಸೌಲಭ್ಯ

#Postal ballot #facility #only for # above 85 years

ನವದೆಹಲಿ: ಲೋಕಸಭೆ ಚುನಾವಣೆಗೆ ಸಿದ್ದತೆ ಆರಂಭವಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರವು ಅಂಚೆ ಮತಪತ್ರದ(Postal ballot) ಮೂಲಕ ಮತ ಚಲಾಯಿಸುವ ವಯಸ್ಸಿನ ಮಿತಿಯನ್ನು 80 ರಿಂದ 85 ವರ್ಷಗಳಿಗೆ ಹೆಚ್ಚಿಸಿದೆ.ಬೆಂಗಳೂರು ಉತ್ತರ, ಬೆಂಗಳೂರು. ಕೇಂದ್ರ & ಬೆಂಗಳೂರು. ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ & ಶೇ. 40ಕ್ಕಿಂತ ಹೆಚ್ಚಿನ ಅಂಗವೈಕಲ್ಯವುಳ್ಳವರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಭರ್ತಿ ಮಾಡಿದ ದೃಢೀಕೃತ 12ಡಿ ನಮೂನೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ಸಲ್ಲಿಸಬೇಕಾಗಿರುತ್ತದೆ. ಇದನ್ನು ಸಲ್ಲಿಸಿದ ನಂತರ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅವಕಾಶ ಇರುವುದಿಲ್ಲ. EC ವೆಬ್‌ಸೈಟ್‌ನಲ್ಲೂ ನಮೂನೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.ಸಾರ್ವತ್ರಿಕಾ ಲೋಕಸಭಾ ಚುನಾವಣೆ-2024ರ(Loksabha election) ಹಿನ್ನೆಲೆ ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ನಿಟ್ಟನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ದಿನಾಂಕ: 21-03-2024 ರಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಪಟ್ಟಿಯನುಸಾರ ಮನೆ-ಮನೆ ಭೇಟಿ ನೀಡಿ ಪಟ್ಟಿ ಸಂಗ್ರಹಿಸಿ 12ಡಿ ನಮೂನೆಗಳ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 12ಡಿ ನಮೂನೆ ಪಡೆದು ದೃಢೀಕರೀಸಲು ಸಾಧ್ಯವಾಗದಿದ್ದಲ್ಲಿ ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ https://www.eci.gov.in/ಗೆ ಭೇಟಿ ನೀಡಿದರೆ 12ಡಿ ನಮೂನೆಗಳು ಲಭ್ಯವಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷರ್ ಗಿರಿ ನಾಥ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ‌ ಸದರಿ ನಮೂನೆಗಳನ್ನು ಭರ್ತಿಮಾಡಿ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ 12ಡಿ ನಮೂನೆಗಳನ್ನು ನೇರವಾಗಿ ಸಲ್ಲಿಸುವ ಅವಕಾಶವೂ ಇರುತ್ತದೆ ಎಂದು ತಿಳಿಸಿರುತ್ತಾರೆ.

Exit mobile version