Revenue Facts

ಕೇವಲ 399 ರೂ.ಗೆ ಅಂಚೆ ಇಲಾಖೆಯ ಅಪಘಾತ ವಿಮೆ;

ಕೇವಲ 399 ರೂ.ಗೆ ಅಂಚೆ ಇಲಾಖೆಯ ಅಪಘಾತ ವಿಮೆ;

ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.ಇದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅತೀ ಕಡಿಮೆ ಮೊತ್ತಕ್ಕೆ ಅಪಘಾತ ವಿಮೆ ಪಡೆಯುವ ಅವಕಾಶ ಕಲ್ಪಿಸಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.

ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ಅಂಚೆ ಕಚೇರಿಗೆ ತೆರಳಿ ವಾರ್ಷಿಕವಾಗಿ 399 ರೂ. ಹಣ ಕಟ್ಟಿದರೆ ಈ 10ಲಕ್ಷ ರೂ. ಅಪಘಾತ ವಿಮೆಗೆ ಅರ್ಹರಾಗುತ್ತೀರಿ. ಈ ವಿಮೆಯ ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆ ಸೂಚಿಸಿರುವ ಇನ್ನಿತರ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಅವರು ವಿವಿಧ ರೂಪದಲ್ಲಿ ಆರ್ಥಿಕ ಸಹಾಯ ಪಡೆಯಬಹುದು.

ನೀವು ಅಂಚೆ ಇಲಾಖೆಯಲ್ಲಿ ‘ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್’ ಖಾತೆ ಹೊಂದಿದ್ದರೆ ನೀವು ಈ ಅಪಘಾತ ವಿಮೆ ಮಾಡಿಸಲು ಅರ್ಹರಾಗುತ್ತೀರಿ. ಒಂದು ವೇಳೆ ಈ ಖಾತೆ ಹೊಂದಿರದಿದ್ದರೆ ಕೂಡಲೇ 100ರೂ. ಕಟ್ಟಿ ಹತ್ತಿರದ ಅಂಚೆ ಕಚೇರಿಯಲ್ಲಿ ಒಂದೇ ದಿನದಲ್ಲಿ ‘ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್’ ಖಾತೆ ತೆರೆಯಬಹುದು.
ಹೊಸದಾಗಿ ‘ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್’ ಖಾತೆ ತೆರೆಯುವವರು ಆಧಾರ ಮತ್ತು ಪ್ಯಾನ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲಾತಿ ಸಲ್ಲಿಕೆ ಕಡ್ಡಾಯವಾಗಿರುತ್ತದೆ. ನಂತರ ಖಾತೆಯಲ್ಲಿ ಕನಿಷ್ಠ 500 ರೂ.ಹಣ (ಡೆಪಾಸಿಟ್) ಇಡಬೇಕಿದೆ. ಬಳಿಕ ಅದೇ ಖಾತೆ ಮೂಲಕ ನೀವು 399 ರೂ. ಹಣ ಕಟ್ಟಿ 10ಲಕ್ಷ ರೂಪಾಯಿಯ ಅಪಘಾತ ವಿಮೆ ಮಾಡಿಸಬಹುದು. ಈ ಯೋಜನೆಯನ್ನು ಪ್ರತಿ ವರ್ಷ 399 ರೂ. ಪಾವತಿಸುವ ಮೂಲಕ ನವೀಕರಿಸಬೇಕು.

ವಿಮಾ ಯೋಜನೆ ಫಲಾನುಭವಿಯು ಆಕಸ್ಮಿಕ ಸಾವನ್ನಪ್ಪಿದರೆ ಅವರು ಕುಟುಂಬಸ್ಥರಿಗೆ ಹತ್ತು ಲಕ್ಷ ರೂ. ನೀಡಲಾಗುತ್ತದೆ. ಅಂದರೆ ಬಸ್, ಕಾರು ಇನ್ನಿತರ ಅಪಘಾತಗಳು, ಹಾವು ಕಡಿತ, ವಿದ್ಯುತ್ ಆಘಾತ, ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವು ಸೇರಿದಂತೆ ವಿವಿಧ ಆಕಸ್ಮಿಕವಾಗಿ ಸಾವು ಸಂಭವಿಸಿದರೆ ಪರಿಹಾರ ಪಡೆಯಬಹುದು. ಇದರ ಪೂರ್ತಿ ಮಾಹಿತಿ ಈ ಕೆಳಗಿನಂತಿದೆ.

ಅಪಘಾತ ವಿಮೆಯ ಪ್ರಯೋಜನಗಳು

1.ಆಸ್ಪತ್ರೆ ವೆಚ್ಚಕ್ಕಾಗಿ 60,000 ರೂ. ಹಣಕ್ಕೆ ಅರ್ಹ.
2.ಓಪಿಡಿ ವೆಚ್ಚಕ್ಕೆಂದು 30,000 ಸಾವಿರ ರೂ.ಹಣ
3.ಅಪಘಾತದಲ್ಲಿ ಪಾರ್ಶ್ವವಾಯು ಉಂಟಾದರೆ 10ಲಕ್ಷ ರೂ. ನೀಡಿಕೆ
4.ಅಪಘಾತದಿಂದ ಮರ ಹೊಂದಿದಲ್ಲಿ 10ಲಕ್ಷ ರೂ. ಆರ್ಥಿಕ ಸಹಾಯ.
5.ಕುಟುಂಬದ ಆಸ್ಪತ್ರೆ ಪ್ರಯಾಣ ವೆಚ್ಚಕ್ಕೆ 25,000 ರೂ. ಸಹಾಯ.

Exit mobile version