24.8 C
Bengaluru
Sunday, May 19, 2024

ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆಅವಕಾಶ

ಚುನಾವಣಾ ಆಯೋಗ 2023ರ ಕರ್ನಾಟಕದ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಮೇ 10ರ ಬುಧವಾರ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ವೇಳಾಪಟ್ಟಿ ಪ್ರಕಟವಾದ ತಕ್ಷಣ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸಬಹುದಾದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಟ್ಟಿಮಾಡಿ ಚುನಾವಣಾಧಿಕಾರಿಗಳಿಗೆ ನೀಡಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಬಿ ಅಶ್ವಥ್ ಹೇಳಿದರು

ಬುಧವಾರ ನಗರದ ತಾಲ್ಲೂಕು ಕಚೇರಿಯಲ್ಲಿ ಅಂಚೆ ಮತದಾನದ ಪೂರ್ವಸಿದ್ಧತೆ ಕುರಿತಂತೆ ಸಭೆ ನಡೆಸಿದ ಅವರು, ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಚುನಾವಣೆ ದಿನಾಂಕದಂದು ಅವರುಗಳ ಮತಗಟ್ಟೆಗಳಲ್ಲಿ ಮತದಾನ ಮಾಡಲು ಸಾಧ್ಯವಾಗದೇ ಇರುವುದರಿಂದ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದರು.

ಅಂಚೆ ಮತದಾನದ ಪೂರ್ವಸಿದ್ಧತೆ ಕುರಿತಂತೆ ಬುಧವಾರ ನಗರದ ತಾಲ್ಲೂಕು ಕಚೇರಿಯಲ್ಲಿ ಸಭೆ ನಡೆಸಿದ ಅವರು,ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಮೇ 10 ರಂದುನಡೆಯಲಿದೆ ಇದಕ್ಕೆ ಸಂಬಂಧಿಸಿದಂತೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಚುನಾವಣೆ ದಿನಾಂಕದಂದು ಅವರುಗಳ ಮತಗಟ್ಟೆಗಳಲ್ಲಿ ಮತದಾನ ಮಾಡಲು ಸಾಧ್ಯವಾಗದೇ ಇರುವುದರಿಂದ ಅಂಥವರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಆಯೋಗ ಅವಕಾಶವನ್ನು ನೀಡಿದೆ

ಬಿಎಸ್.ಎನ್.ಎಲ್,ಆರೋಗ್ಯ,ವಿದ್ಯುತ್,ರೈಲ್ವೆ,ಕೆ.ಎಸ್.ಆರ್.ಟಿ.ಸಿ, ಟ್ರಾಫಿಕ್ ಪೋಲೀಸ್ ಸೇರಿದಂತೆ 12 ವಿವಿಧ ಇಲಾಖೆಗಳನ್ನು ಪಟ್ಟಿ ಮಾಡಿ ಇಲಾಖೆಗಳ ವ್ಯಾಪ್ತಿಯಲ್ಲಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವುದರೊಂದಿಗೆ 108-ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅರ್ಹ ವ್ಯಕ್ತಿಗಳ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಕಚೇರಿಗೆ ನೀಡಬೇಕು ಎಂದರು,ಅಗತ್ಯ ಸೇವೆಯಲ್ಲಿರುವವರು ಮತದಾನದಿನದ 7 ದಿನ ಮುಂಚಿತವಾಗಿ ನಮೂನೆ 12ಡಿ ಅಡಿ ಅರ್ಜಿ ಭರ್ತಿ ಮಾಡಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ನಮೂನೆ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳ ಮುಖ್ಯಸ್ಥರು ಅನುಮೋದನೆ ನೀಡಬೇಕು. ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಗೌಪ್ಯವಾಗಿ ಅಂಚೆ ಮತಪತ್ರಗಳ ಮೂಲಕ ಮತ ಚಲಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.ಈ ಅರ್ಜಿಯನ್ನು ಸಂಬಂಧಪಟ್ಟ ಸಂಸ್ಥೆಯು ನೇಮಕ ಮಾಡಿದ ನೋಡಲ್ ಅಧಿಕಾರಿಯು ಪರಿಶೀಲಿಸಬೇಕು ಹಾಗೂ ಅಂಚೆ ಮತಪತ್ರ ಸೌಲಭ್ಯವನ್ನು ಕೋರುವಂತ ಅರ್ಜಿಯು ಚುನಾವಣೆಯ ಘೋಷಣೆಯಾದ ದಿನಾಂಕದಿಂದ ಸಂಬಂಧಪಟ್ಟ ಚುನಾವಣೆಯ ಅಧಿಸೂಚನೆಯ ದಿನಾಂಕದ ನಂತರದ 5 ದಿನಗಳವರೆಗೆ ಅವಧಿಯಲ್ಲಿ ಚುನಾವಣಾಧಿಕಾರಿ(ಆರ್‍ಓ) ಗೆ ತಲುಪಿಸಬೇಕು ಎಂದು ಹೇಳಿದರು

Related News

spot_img

Revenue Alerts

spot_img

News

spot_img