ಬೆಂಗಳೂರು;ಬೆಂಗಳೂರು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದ (ECI) ನಿರ್ದೇಶನದ ಮೇರೆಗೆ ಬಿಬಿಎಂಪಿ ಆ. 27ರಂದು ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು(Voterlist) 2024ರ ಜನವರಿ 5ರಂದು ಪ್ರಕಟಿಸಲು ನಿರ್ಧರಿಸಿದೆ.ರಾಜ್ಯ ಹೈಕೋರ್ಟ್‌ನ ಆದೇಶದ ಮೇರೆಗೆ ನಗರಾಭಿವೃದ್ಧಿ ಇಲಾಖೆ (UD) ಸೆ.25 ರಂದು 225 ವಾರ್ಡ್‌ಗಳ ಅಂತಿಮ ಮರುವಿಂಗಡಣೆ(Reclassification) ಕುರಿತಂತೆ ಗೆಜೆಟ್(Gejet) ಅಧಿಸೂಚನೆ ಹೊರಡಿಸಿದ್ದು, ವಾರ್ಡ್ ಮೀಸಲು ನಿಗದಿಗೆ ಮುಂದಾಗಿದೆ. ಈ ವರ್ಷ ನವೆಂಬರ್ ವೇಳೆಗೆ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಸೆ. 25ರಂದು ಕೇಂದ್ರ ಚುನಾವಣಾ ಆಯೋಗ ನೀಡಿದ ನಿರ್ದೇಶನದಂತೆ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲು ಬಿಬಿಎಂಪಿ ಸಿದ್ಧತೆ ಆರಂಭಿಸಿದೆ. ಬಿಜೆಪಿ ಸರ್ಕಾರವು ಈ ಹಿಂದೆ ವಿಂಗಡಣೆ ಮಾಡಿದ 243 ವಾರ್ಡ್‌ಗಳಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ನಂತರ ಕರ್ನಾಟಕ ಹೈಕೋರ್ಟ್ ಜೂನ್‌ನಲ್ಲಿ ಸರ್ಕಾರಕ್ಕೆ ವಿಂಗಡಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 12 ವಾರಗಳ ಕಾಲಾವಕಾಶವನ್ನು ನೀಡಿತ್ತು.
ಅ.27-ಬಿಬಿಎಂಪಿ ಕರಡು ಮತದಾರರ ಪಟ್ಟಿ ಪ್ರಕಟಣೆ
ಅಕ್ಟೋಬರ್ 27 ರಿಂದ ಡಿಸೆಂಬರ್ 9 ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ
ಡಿಸೆಂಬರ್ 26 ಆಕ್ಷೇಪಣೆಗಳ ಪರಿಗಣಿಸಿ ಅಂತಿಮ ನಿರ್ಧಾರ
2024 ರ ಜನವರಿ 5 ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ