26.7 C
Bengaluru
Sunday, December 22, 2024

ಎಸ್‌ಎಂ ಕೃಷ್ಣ ಸೇರಿದಂತೆ 106 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ: 2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ,ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿವಿಧ ರಾಜ್ಯಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್‌ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಅಂತೆಯೇ ಛತ್ತೀಸ್​ಗಡದ ಜಾನಪದ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪಾಂಡವಾನಿ ಗಾಯಕಿ ಉಷಾ ಬಾರ್ಲೆ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು. ಇನ್ನೂ ಸುಕಮ ಆಚಾರ್ಯ, ಜೋಧಯ್ಯಬಾಯಿ ಬೈಗಾ, ಪ್ರೇಮ್ಜಿತ್ ಬರಿಯಾ, ಮುನೀಶ್ವರ ಚಂದಾವರ, ಹೇಮಂತ್ ಚೌಹಾಣ್ ಭಾನುಭಾಯಿ ಚಿತಾರಾ, ಹೆಮೊಪ್ರೊವಾ ಚುಟಿಯಾ, ನರೇಂದ್ರ ಚಂದ್ರ ದೆಬ್ಬರ್ಮ (ಮರಣೋತ್ತರ),ಸುಭದ್ರಾ ದೇವಿ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಖಾದರ್ ವಲ್ಲಿ ದೂದೇಕುಲ, ಹೇಂ ಚಂದ್ರ ಗೋಸ್ವಾಮಿ, ಪ್ರಿತಿಕಾನಾ ಗೋಸ್ವಾಮಿ, ರಾಧಾ ಚರಣ್ ಗುಪ್ತಾ, ಮೊಡಡುಗು ವಿಜಯ್ ಗುಪ್ತಾ, ಅಹ್ಮದ್ ಹುಸೇನ್ ಮತ್ತು ಮೊಹಮ್ಮದ್ ಹುಸೇನ್ (ಜೋಡಿ), ದಿಲ್ಶಾದ್ ಹುಸೇನ್, ಭಿಕು ರಾಮ್‌ಜಿ ಇದತೇ, ಸಿ ಐ ಇಸಾಕ್, ರತ್ತನ್ ಸಿಂಗ್ ಜಗ್ಗಿ, ಬಿಕ್ರಮ್ ಬಹದ್ದೂರ್ ಜಮಾತಿಯಾ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಒಟ್ಟು 106 ಮಂದಿಗೆ ಪದ್ಮಪುರಸ್ಕಾರದ ಗೌರವ ದೊರೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img