ಬೆಂಗಳೂರು;ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಜ.25ರಿಂದ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ರಾಜಸ್ಥಾನ ರಾಜಧಾನಿ ಜೈಪುರಕ್ಕೆ ಆಗಮಿಸಲಿದ್ದಾರೆ. ಇಂದು ಸಂಜೆ 5.30ಕ್ಕೆ ಮ್ಯಾಕ್ರಾನ್ ಅವರನ್ನು ಪ್ರಧಾನಿ ಮೋದಿ ಅವರು ಸ್ವಾಗತಿಸಲಿದ್ದಾರೆ. ಬಳಿಕ ಅವರು ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಜ.26ರಂದು ದೆಹಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮ್ಯಾಕ್ರಾನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಯುನೆಸ್ಕೋ ವಿಶ್ವ ಪರಂಪರೆಯಿ ತಾಣವಾದ ಜಂತರ್ ಮಂತರ್ ಪ್ರವಾಸದಲ್ಲಿ ಪ್ರಧಾನಿ ಮೋದಿ ರೊಂದಿಗೆ ಮ್ಯಾಕ್ರನ್ ಪ್ರವಾಸ ಕೈಗೊಳ್ಳಲಿದ್ದಾರೆ. ನಂತರ ಜಂಟಿ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ,ಸಂಜೆ 7.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಫ್ರಾನ್ಸ್ ಅಧ್ಯಕ್ಷ ಭೇಟಿಯಾಗಲಿದ್ದಾರೆ.
ಮ್ಯಾಕ್ರಾನ್ ಕಾರ್ಯಕ್ರಮಗಳ ವೇಳಾಪಟ್ಟಿ
ಮಧ್ಯಾಹ್ನ 2:30: ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮ್ಯಾಕ್ರಾನ್ ಅವರು 3:15 ಕ್ಕೆ ಅಮೇರ್ ಕೋಟೆಗೆ ಭೇಟಿ ನೀಡಲಿದ್ದಾರೆ. ಸಂಜೆ 5:30ಕ್ಕೆ ಜಂತರ್ ಮಂತರ್ ಭೇಟಿ ಕೊಡಲಿದ್ದಾರೆ. ಸಂಜೆ 6 ಗಂಟೆಗೆ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಂತರ ಸಂಜೆ 6:15ಕ್ಕೆ ಹವಾ ಮಹಲ್‌ಗೆ ಭೇಟಿ ಕೊಟ್ಟು 7:15 ಕ್ಕೆ ಪ್ರಧಾನಿಯವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 8:50ಕ್ಕೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.