20.8 C
Bengaluru
Thursday, December 5, 2024

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ.

#Prime Minister #narendamodi#banglore

ಬೆಂಗಳೂರು;ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಚಂದ್ರಯಾನ-3 ಇದರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಯುವ ಮೂಲಕ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿದೆ. ಈ ಚಂದ್ರಯಾನ-3ಗೆ ಹಗಲಿರುಳು ಶ್ರಮಿಸಿದ ವಿಜ್ಞಾನಿಗಳಿಗೆ ಅಭಿನಂದಿಸಲು ಇಂದು ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿಕೊಂಡು ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ ನಗರದ ಪೀಣ್ಯದಲ್ಲಿರುವ ಇಸ್ರೋ (ISRO) ಕೇಂದ್ರಕ್ಕೆ ಇದೀಗ ತೆರಳಿದ್ದಾರೆ. ಇಸ್ರೋ ಸಂಸ್ಥೆತಯಲ್ಲಿ ಕೆಲಹೊತ್ತು ವಿಜ್ಞಾನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ.‌ ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.

ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು,ಚಂದ್ರಯಾನ-3ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಅಸಾಧಾರಣ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಎದುರುನೋಡುತ್ತಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್ನಲ್ಲಿ ಚಂದ್ರಯಾನ-3 ಮಿಷನ್ನಲ್ಲಿ ಭಾಗಿಯಾಗಿರುವ ಇಸ್ರೋ ತಂಡದ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ.

Related News

spot_img

Revenue Alerts

spot_img

News

spot_img