27.7 C
Bengaluru
Wednesday, July 3, 2024

ಮಹಿಳಾ ದಿನಾಚರಣೆಗೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್;ಗೃಹ ಬಳಕೆ LPG ದರ 100 ರೂ ಇಳಿಕೆ

#rime Minister #odi #umper Gift # Women’s Day #omestic LPG #rice reduced # Rs 100

ದೆಹಲಿ;ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ, LPG ಸಿಲಿಂಡ‌ರ್ ಬೆಲೆಯಲ್ಲಿ ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.ಅಡುಗೆ ಅನಿಲ ಸಿಲಿಂಡರ್‌ನ ದರವನ್ನು 100 ರು. ಇಳಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಶುಕ್ರವಾರ ಈ ಬಗ್ಗೆ ಎಕ್ಸ್ ಮೂಲಕ ಮಾಹಿತಿ ನೀಡಿದ್ದು, ಮಹಿಳಾ ದಿನಾಚರಣೆಗೆ ದರ ಕಡಿಮೆ ಮಾಡಿ ಗಿಫ್ಟ್ ನೀಡಿದ್ದೇವೆ ಎಂದಿದ್ದಾರೆ. ಇದರಿಂದ ದೇಶದ ಲಕ್ಷಾಂತರ ಮಹಿಳೆಯರು ಅನುಕೂಲ ಪಡೆಯಲಿದ್ದಾರೆ. ನರೇಂದ್ರ ಮೋದಿ ಅವರೇ ಈ ಕುರಿತು ಎಕ್ಸ್‌ ಸಾಮಾಜಿಕ ಜಲತಾಣದಲ್ಲಿ ಮಾಹಿತಿ ನೀಡಿದ್ದಾರೆ.ಇಂದು ಮಹಿಳೆಯರ ದಿನ. ಹಾಗಾಗಿ, ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂಪಾಯಿ ಇಳಿಸಲು ತೀರ್ಮಾನಿಸಿದೆ. ಇದರಿಂದ ದೇಶದ ಲಕ್ಷಾಂತರ ಮನೆಗಳಲ್ಲಿ ಹಣಕಾಸು ಹೊರೆಯಾಗುವುದು ತಪ್ಪಲಿದೆ. ಅದರಲ್ಲೂ, ದೇಶದ ಹೆಣ್ಣುಮಕ್ಕಳ ಸಬಲೀಕರಣದ ದಿಸೆಯಲ್ಲಿ ಕೇಂದ್ರ ಸರ್ಕಾರದ ನಿರ್ಧಾರವು ಮಹತ್ವದ್ದಾಗಿದೆ” ಎಂದು ನರೇಂದ್ರ ಮೋದಿ ಪೋಸ್ಟ್‌ ಮಾಡಿದ್ದಾರೆ.ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ 300 ರೂಪಾಯಿ ಸಬ್ಸಿಡಿಯನ್ನು (LPG Subsidy) 2024-25ನೇ ಹಣಕಾಸು ವರ್ಷದವರೆಗೆ ವಿಸ್ತರಣೆ ಮಾಡಲು ಗುರುವಾರ (ಮಾರ್ಚ್‌ 7) ನಡೆದ ಸಚಿವ ಸಂಪುಟ ಸಭೆಯಲ್ಲಿಯೇ ತೀರ್ಮಾನ ಮಾಡಲಾಗಿದೆ.ಸರ್ಕಾರದ ಈ ನಿರ್ಧಾರದೊಂದಿಗೆ ಇದೀಗ ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 100 ರೂ. ಕಡಿಮೆ ಆಗಿ 805.50 ರೂ. ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 803 ರೂ. ಆಗಿದೆ.

Related News

spot_img

Revenue Alerts

spot_img

News

spot_img