Revenue Facts

ಏ.27 ರಂದು `ಕರ್ನಾಟಕ ಚುನಾವಣಾ ಆಖಾಡ’ಕ್ಕೆ ಪ್ರಧಾನಿ ಮೋದಿ ಎಂಟ್ರಿ : 180 ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಏಪ್ರಿಲ್ 29 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಬಂದು ಹೋಗಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.

ಶಾ ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಬಂದು ಚುನಾವಣಾ ಪ್ರಚಾರ ನಡೆಸಿದ್ದಾರೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ ರೋಡ್ ಶೋ, ರ್ಯಾಲಿ, ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಿಜೆಪಿ ರೂಪರೇಷ ಸಿದ್ದಪಡಿಸುತ್ತಿದೆ. ಏಪ್ರಿಲ್ 29 ರಂದು ಬೀದರ್, ದಾವಣಗೆರೆ, ಚಿತ್ರದುರ್ಗ ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿದೆ.

ಚುನಾವಣಾ ಕಣ ಕರ್ನಾಟಕದಲ್ಲಿ ತಾರಕಕ್ಕೇರಿದ್ದು ಯಾವ ಪಕ್ಷಕ್ಕೆ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂಬುದೇ ಒಂದು ರಹಸ್ಯ ವಿಷಯವಾಗಿದೆ. ದೇಶದೆಲ್ಲೆಡೆ ತಮ್ಮ ವಿಭಿನ್ನ ತಂತ್ರಗಾರಿಕೆಯ ಮೂಲಕ ಎಲ್ಲಾ ರಾಜ್ಯಗಳಲ್ಲೂ ವಿಜಯಮಾಲೆಯನ್ನು ಧರಿಸಿ ಓಡುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿ.ಜೆ.ಪಿ) ಯಾವ ರೀತಿ ಈ ಭಾರಿ ಗೆಲ್ಲಲಿದೆ ಎಂಬುದು ತುಂಬಾ ಕುತೂಹಲಕರವಾಗಿದೆ. ತಮ್ಮ ಪಕ್ಷದ ಮುಖ್ಯ ಮುಖಗಳಾಗಿರುವ ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಬಂದು ಹೋಗಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.

ಇದು ಯಾವ ರೀತಿ ಮತವಾಗಿ ಪರಿವರ್ತಿಸಲಿದೆಯೋ ಅಥವಾ ಬೆಲೆಏರಿಕೆ ಬಿಸಿಯಲ್ಲಿರುವ ಜನಗಳ ಸಿಟ್ಟಿಗೆ ತುಪ್ಪ ಸುರಿದಂತಾಗುವುದೋ ಕಾದುನೋಡಬೇಕಿದೆ.

Exit mobile version