21.2 C
Bengaluru
Monday, July 8, 2024

ಪ್ರಧಾನಿ ಮೋದಿ ಫೆ.6ರಂದು ರಾಜ್ಯಕ್ಕೆ ಆಗಮನ,

ಬೆಂಗಳೂರು: ಫೆಬ್ರವರಿ 6 ರಂದು ನಡೆಯಲಿರುವ ಇಂಡಿಯಾ ಎನರ್ಜಿ ವೀಕ್ – ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನೈಸ್ ರಸ್ತೆ ಜಂಕ್ಷನ್ ಮಾದಾವರ ಬಳಿಯಿರುವ ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಅಂದು ಬೆಳಗ್ಗೆ ‘ಇಂಡಿಯಾ ಎನರ್ಜಿ ವೀಕ್’ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅನಂತರ, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದೇರಹಳ್ಳಿ ಕಾವಲ್‍ನಲ್ಲಿ ಎಚ್.ಎ.ಎಲ್‍ನ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಈ ವರ್ಷ ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ – ಈ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದೆ. ಕರ್ನಾಟಕದಲ್ಕಿ ಏಪ್ರಿಲ್​​ ತಿಂಗಳ ಮಧ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಗಳು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್​ ಇದ್ದಂತೆ.
ಈ ಮೊದಲು ಚುನಾವಣೆ (Election) ದಿನಾಂಕ ಪ್ರಕಟವಾದ ಬಳಿಕ ಪ್ರಚಾರ ಭಾಷಣಕ್ಕೆ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಕರ್ನಾಟಕವನ್ನು (Karnataka) ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ತನ್ನ ತಂತ್ರವನ್ನು ಬದಲಾಯಿಸಿದ್ದು ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಮೋದಿ ಅವರ ರಾಜ್ಯ ಪ್ರವಾಸವನ್ನು ಫಿಕ್ಸ್‌ ಮಾಡುತ್ತಿದೆ.

ಬೆಳಗ್ಗೆ 8:20ರ ಸುಮಾರಿಗೆ ದೆಹಲಿಯಿಂದ ಹೊರಡುವ ಮೋದಿ ಅವರು ವಿಶೇಷ ವಿಮಾನದ ಮೂಲಕ 11 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11:30ರ ಸುಮಾರಿಗೆ ನಗರದ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಆಯೋಜನೆಗೊಂಡಿರುವ ʼಭಾರತ ಇಂಧನ ಸಪ್ತಾಹʼ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲೂಕುಗಳಿಗೆ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ ಯೋಜನೆಗೆ ಅದೇ ಸ್ಥಳದಲ್ಲಿ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.ಫೆಬ್ರವರಿ ತಿಂಗಳಲ್ಲಿ ಮತ್ತೆ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣವಾಗ್ತಿರುವ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಪ್ರಧಾನಿಯವರನ್ನು ಕಾಣಲು ಜಿಲ್ಲೆಯ ಲಕ್ಷಾಂತರ ಜನರು ಅಂದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಇದಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಈ ಹಿಂದೆ ಹೇಳಿದ್ದರು.

ಫೆಬ್ರವರಿ 2ನೇ ವಾರದಲ್ಲಿ ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿರುವ ಏರೋ ಇಂಡಿಯಾ ಕಾರ್ಯಕ್ರಮಕ್ಕೂ ಮೋದಿ ಆಗಮಿಸಲಿದ್ದಾರೆ. ಫೆ.6 ರಂದು ಒಂದು ದಿನದ ಕಾರ್ಯಕ್ರಮದ ನಂತರ ಫೆ.13ಕ್ಕೆ ಮತ್ತೆ ಬೆಂಗಳೂರಿಗೆ ಮೋದಿ ಭೇಟಿ ನೀಡಲಿದ್ದು, ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ಬು ಉದ್ಘಾಟನೆ ಮಾಡಲಿದ್ದಾರೆ.ಫೆ.27 ರಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಿದ್ದು, ಅಂದೇ ಶಿವಮೊಗ್ಗ ವಿಮಾನ ನಿಲ್ದಾಣ ರಾಷ್ಟ್ರಕ್ಕೆ ಸಮರ್ಪಣೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಯಡಿಯೂರಪ್ಪ ಮೋದಿ ಅವರನ್ನು ಆಹ್ವಾನಿಸಿದ್ದಾರೆ.

Related News

spot_img

Revenue Alerts

spot_img

News

spot_img