Revenue Facts

ಹೈಟೆಕ್‌ ರೈಲ್ವೆ ನಿಲ್ದಾಣ ಉದ್ಘಾಟನೆ;ಫೆ. 27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

ಹೈಟೆಕ್‌ ರೈಲ್ವೆ ನಿಲ್ದಾಣ ಉದ್ಘಾಟನೆ;ಫೆ. 27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು,- ಫೆಬ್ರವರಿ 27ಕ್ಕೆ ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರಮೋದಿ ಭೇಟಿ ನೀಡುತ್ತಿದ್ದು, ಹೈಟೆಕ್ ರೈಲ್ವೇ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಫೆ.27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸಿ ಹೈಟೆಕ್ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು.ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಜಿಲ್ಲಾ ಕ್ರೀಡಾಂಗಣ, ಸಿಪಿಎಡ್ ಮೈದಾನ, ಅಂಗಡಿ ಕಾಲೇಜು ಮೈದಾನ, ಯಡಿಯೂರಪ್ಪ ರಸ್ತೆ ಬಳಿಯ ಬಯಲು ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಸ್ಥಳವನ್ನು ಪರಿಶೀಲಿಸುತ್ತಿದ್ದೇವೆ. ಸಮಾವೇಶಕ್ಕೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಲಾಗುವುದು. ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ ಸಭೆಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಹಿಂದೆಯೇ ನಿಗದಿಯಾಗಿದ್ದು, ಎಲ್ಲಾ ಸಿದ್ಧತೆಗಳು ನಡೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಟ್ಟು ಬೆಳಗಾವಿ ಕಾರ್ಯಕ್ರಮಗಳಿಗೆ ಸೀಮಿತವಾಗಿ ಸಿಎಂ ಸಭೆ ನಡೆಸಿದರು. ಮೊದಲು ಶಿವಮೊಗ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ ನಂತರ ಬೆಳಗಾವಿಗೆ ತೆರಳಲಿದ್ದಾರೆ. 27 ರ ಮಧ್ಯಾಹ್ನ 2.15 ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದು. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನಗಳಲ್ಲಿ ಯಾವ ಜಾಗದಲ್ಲಿ ಸಮಾವೇಶ ನಡೆಸಬೇಕು ಎನ್ನುವ ಕುರಿತು ಚರ್ಚಿಸಲಾಯಿತು.ಈಗಾಗಲೇ ಸಭೆಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಸುರೇಶ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಎಂಎಲ್ಸಿ ಕೇಶವ ಪ್ರಸಾದ್, ಉಜ್ವಲಾ ಬಡವನಾಚೆ, ರಮೇಶ ದೇಶಪಾಂಡೆ, ಆರ್.ಎಸ್.ಮುತಾಲಿಕ್, ಮುರಗೇಂದ್ರಗೌಡ ಪಾಟೀಲ, ಜಯಪ್ರಕಾಶ ಎಂ.ಸಿ, ಮತ್ತಿತರರು ಉಪಸ್ಥಿತರಿದ್ದರು.

ಅಂದು ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿರುವ ಮೋದಿ‌ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ ಬಿಡುಗಡೆಗೂ ಚಾಲನೆ ನೀಡಲಿದ್ದಾರೆ. ಜತೆಗೆ ಬೆಳಗಾವಿಯಲ್ಲಿ 18 ಕ್ಷೇತ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಈಗಿ‌ನಿಂದಲೇ ತಯಾರಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ ಮಾತನಾಡಿ, ಬೆಳಗಾವಿ ಜಿಲ್ಲೆಯ ಮೂರು ಸಂಘಟನಾತ್ಮಕ ಜಿಲ್ಲೆಗಳಿಂದ ತಯಾರಿ ಮಾಡಿಕೊಳ್ಳಲಾಗಿದೆ. ಸಮಾವೇಶ ನಡೆಸುವ ಸ್ಥಳದ ಬಗ್ಗೆ ಸರ್ಕಾರದಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

Exit mobile version