28.5 C
Bengaluru
Saturday, April 19, 2025

ಇಂದು 28 ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ;ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು;ದೇಶದಾದ್ಯಂತ ಬರೋಬ್ಬರಿ 553 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ(Narenramodi) ಅವರು ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇವುಗಳ ಜೊತೆಗೆ 1,500 ರೈಲು ಮೇಲ್ವೇತುವೆಗಳು ಮತ್ತು 1,500 ಅಂಡರ್ ಪಾಸ್‌ಗಳನ್ನು ರಾಷ್ಟ್ರಕ್ಕೆ ಉದ್ಘಾಟನೆಗೊಳಿಸಲಿದ್ದಾರೆ. ಈ ಪಟ್ಟಿಯಲ್ಲಿ ತೆಲಂಗಾಣ 15 ಮತ್ತು ಆಂಧ್ರಪ್ರದೇಶದಲ್ಲಿ 34 ಅಮೃತ್ ಭಾರತ್ ನಿಲ್ದಾಣಗಳಿವೆ. ಈ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 41 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.12 ರೈಲ್ವೆ ನಿಲ್ದಾಣಗಳು ಮಾತ್ರವಲ್ಲದೇ ಒಂದು ರಸ್ತೆ ಕೆಳ ಸೇತುವೆಗೂ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ತಿಳಿಸಿದ್ದಾರೆ.ಫೆಬ್ರವರಿ 26 ರಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಒಟ್ಟು 367.24 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ 12 ರೈಲ್ವೆ ನಿಲ್ದಾಣಗಳಿಗೆ ಮತ್ತು ಒಂದು ಕೆಳಸೇತುವೆಗೆ ಶಂಕುಸ್ಥಾಪನೆ ನೆರವೇರಲಿದ್ದಾರೆ. ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಮೈಸೂರು ವಿಭಾಗದ 12 ನಿಲ್ದಾಣಗಳಾದ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ರಾಣೆಬೆನ್ನೂರು, ಸಾಗರ ಜಂಬಗಾರು, ಸಕಲೇಶಪುರ, ಶಿವಮೊಗ್ಗ ಟೌನ್, ಸುಬ್ರಹ್ಮಣ್ಯ ರಸ್ತೆ, ತಾಳಗುಪ್ಪ ಮತ್ತು ತಿಪಟೂರಿನ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲ ಹೆಚ್ಚಿಸಲು ಆಧುನಿಕ ಸೌಲಭ್ಯಗಳನ್ನು ಒದಗಿಸಲು ಯೋಜಿಸಲಾಗಿದೆ ಎಂದರು.

Related News

spot_img

Revenue Alerts

spot_img

News

spot_img