ಬೆಂಗಳೂರು;ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗಕ್ಕೆ(Shivamogga) ಆಗಮಿಸಲಿದ್ದಾರೆ. ಮಧ್ಯಾಹ್ನ 1:15ಕ್ಕೆ ನಗರಕ್ಕೆ ಆಗಮಿಸುವ ನರೇಂದ್ರ ಮೋದಿ, ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯಲಿದೆ. ಕರುನಾಡಿನಲ್ಲಿ ಪ್ರಧಾನಿ ಮೋದಿಯವರ ಈ ಬೃಹತ್ ರ್ಯಾಲಿಯಲ್ಲಿ ಭಾಗಿಯಾಗಲು ರಾಜ್ಯದ ಮೂಲೆ ಮೂಲೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಸುಗಮ ಸಂಚಾರಕ್ಕಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಮೊದಲು ಪೆಂಡಾಲ್‌ನ ಮಧ್ಯದವರೆಗೆ ಕಾರಿನಲ್ಲಿ ಬಂದು ಅಲ್ಲಿಂದ ತೆರೆದ ವಾಹನದಲ್ಲಿ ವೇದಿಕೆ ಪ್ರವೇಶಿಸಲಿದ್ದಾರೆ. ಮೋದಿ ಅವರನ್ನು ಕಾರ್ಯಕರ್ತರು ಹತ್ತಿರದಿಂದ ನೋಡಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ನರೇಂದ್ರ ಮೋದಿ ಆಗಮನದೊಳಗೆ ಈಶ್ವರಪ್ಪ ಮುನಿಸು ಶಮನಕ್ಕೆ BJP ಯತ್ನಿಸುತ್ತಿದೆ.ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ವಿಧಿಸಲಾಗಿದ್ದು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವವರೆಗೂ ರಸ್ತೆ ಬಂದ್ ಮಾಡಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ಬಳಿಕ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಹ್ಯಾದ್ರಿ ಸರ್ಕಲ್, ಹೊಳೆ ಸ್ಟಾಪ್, ಅಮೀರ್ ಅಹ್ಮದ್ ಸರ್ಕಲ್, ಶಿವಪ್ಪ ನಾಯಕ ಸರ್ಕಲ್, ಕೆಎಸ್ಆರ್‌ಟಿಸಿ ಬಸ್‌ಸ್ಟ್ಯಾಂಡ್ ಸರ್ಕಲ್, ಸರ್ಕ್ಯೂಟ್ ಹೌಸ್ ಸರ್ಕಲ್‌ಗಳಲ್ಲಿ ಓಡಾಟ ನಿರ್ಬಂಧಿಸಲಾಗಿದೆ.ಇನ್ನೂ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಗಿದೆ. 3 ಜನ ಎಸ್‌ಪಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಅಲ್ಲಮಪ್ರಭು ಮೈದಾನ ಅಥವಾ ಫ್ರೀಡಂಪಾರ್ಕ್‌ನಲ್ಲಿ ಸಾವಿರ ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 3 ಜನ ಎಸ್‌ಪಿ , 5 ಜನ ಎಎಸ್‌ಪಿ 36 ಹಾಗೂ 19 ಜನ ಡಿವೈಎಸ್‌ಪಿ(DYSP) ಹಾಗೂ 64 ಸಿಪಿಐ 156 ಜನ ಪಿಎಸ್ಐ ಹಾಗೂ ಒಂದು ಸಾವಿರ ಪೊಲೀಸ್ ಸಿಬ್ಬಂದಿ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.