Revenue Facts

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

#Prime Minister #Narendra Modi # visit #Bangalore today

ಬೆಂಗಳೂರು ನ.25:ವಾಯುಪಡೆಯಿಂದ ಶತಕೋಟಿ ಡೀಲ್ ನಿರೀಕ್ಷೆಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಕಂಪನಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ(Narendra modi) ಅವರು ಭೇಟಿ ನೀಡಲಿದ್ದಾರೆ.ಬೆಳಗ್ಗೆ 9:15ಕ್ಕೆ ಹೆಚ್‌ಎಎಲ್(HAL) ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮೋದಿ, 9:30ರಿಂದ 12 ಗಂಟೆವರೆಗೆ ಹೆಚ್‌ಎಎಲ್ ಆವರಣದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಹೆಚ್‌ಎಎಲ್(HAL) ಈಗಾಗಲೇ ಅಗತ್ಯ ತಯಾರಿಗಳನ್ನು ಮಾಡಿಕೊಂಡಿದೆ. ಮಧ್ಯಾಹ್ನ 12.15 ಕ್ಕೆ ಹೆಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ತೆಲಂಗಾಣದ ದಿಂಡುಗಲ್(Dindugal) ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳಸಲಿದ್ದು, ಅಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುಲಿದ್ದಾರೆ,ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದು ಎರಡನೇ ಸಲ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಆಗಸ್ಟ್ 26ರಂದು ಬೆಂಗಳೂರಿಗೆ ಆಗಮಿಸಿ ಚಂದ್ರಯಾನ 3ರ ಯಶಸ್ಸಿಗೆ ಕಾರಣರಾದ ಇಸ್ರೋ ತಂಡವನ್ನು ಭೇಟಿ ಮಾಡಿ ಅಭಿನಂದಿಸಿದ್ದರು.ಫ್ರೆಂಚ್ ಸಂಸ್ಥೆ ಸಫ್ರಾನ್‌ ಜತೆಗೆ ಜಂಟಿಯಾಗಿ ಹೆಲಿಕಾಪ್ಟರ್ ಎಂಜಿನ್‌ಗಳನ್ನು ವಿನ್ಯಾಸಗೊಳಿಸುವ ಮತ್ತು ಅಭಿವೃದ್ಧಿಪಡಿಸುವ ಕೆಲಸವನ್ನು ಎಚ್‌ಎಎಲ್‌(HAL) ಪ್ರಾರಂಭಿಸಲು ಸಿದ್ಧವಾಗಿದೆ. ಅದೇ ರೀತಿ, ಅಮೆರಿಕನ್‌ ಸಂಸ್ಥೆ ಜಿಇ ಏರೋಸ್ಪೇಸ್‌ನೊಂದಿಗೆ ದೇಶದಲ್ಲಿ ಫೈಟರ್ ಜೆಟ್ ಎಂಜಿನ್‌ಗಳ ಜಂಟಿ ಉತ್ಪಾದನೆಯ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆ ನಡೆಸುತ್ತಿದೆ.

Exit mobile version