ಬೆಂಗಳೂರು: ಸೆಪ್ಟೆಂಬರ್ 11ಕ್ಕೆ ಖಾಸಗಿ(Private) ಸಾರಿಗೆ ವಾಹನ ಮಾಲೀಕರು ಹಾಗು ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಎಂಟಿಸಿ(BMTC) ಎಂಡಿ, ಕೆಎಸ್ ಆರ್ ಟಿಸಿ(KSRTC) ಎಂಡಿ, ಸಾರಿಗೆ ಇಲಾಖೆಯ ಕಮೀಷನರ್ ಹಾಗೂ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.ಪ್ರತಿಭಟನೆಯಿಂದಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅದಕ್ಕೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.ಸೆಪ್ಟೆಂಬರ್ 11 ರಂದು ಜನ ಸಾಮಾನ್ಯರಿಗೆ, ಸ್ಕೂಲ್ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಬಿಎಂಟಿಸಿ, ಕೆಎಸ್ ಆರ್ ಟಿಸಿ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಕೊಟ್ಟಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಆಟೋ, ಕ್ಯಾಬ್ ಗಳು ಸಂಚಾರ ಮಾಡ್ತಿದ್ದ ರೂಟ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ(BMTC) ಬಸ್ ಗಳನ್ನು ರೋಡಿಗಿಳಿಸುವಂತೆ ಸೂಚನೆ ನೀಡಿದ್ದಾರೆ.ಸೆ.11 ರಂದು ರಾಜಧಾನಿಯಲ್ಲಿ ಸ್ಕೂಲ್, ಕಾಲೇಜು ಮಕ್ಕಳಿಗೆ ಎಕ್ಸಾಂ, ಟೆಸ್ಟ್ ಏನಾದರೂ ಇದ್ದರೆ ಅಂತಹ ಸ್ಕೂಲ್ ಕಾಲೇಜಿಗೆ ಕೆಎಸ್ ಆರ್ ಟಿಸಿ ಬಸ್ಸುಗಳನ್ನು ನಿಯೋಜನೆ ಮಾಡಬೇಕು. ರೋಗಿಗಳಿಗೆ, ಮಹಿಳೆಯರಿಗೆ ಸಮಸ್ಯೆ ಆಗದ ರೀತಿಯಲ್ಲಿ ಆಸ್ಪತ್ರೆ, ಗಾರ್ಮೆಂಟ್ಸ್ ಬಳಿ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕೆಂದು ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.ಕೆಲವೊಂದಷ್ಟು ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗ್ತಿಲ್ಲ ಅಂತಹ ಸಂಘಟನೆಗಳ ಆಟೋ, ಕ್ಯಾಬ್, ಬಸ್ ಚಾಲಕರಿಗೆ ಅಂದು ಕೆಲಸ ಮಾಡಲು ಭದ್ರತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಸೆ.11 ರಂದು ಖಾಸಗಿ ಸಾರಿಗೆ ಪ್ರತಿಭಟನೆ:ಜನಸಾಮಾನ್ಯರಿಗೆ ತೊಂದರೆ ಆಗದಂತೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಎಂಡಿಗಳಿಗೆ ಸೂಚನೆ
by RF Desk