#Property Tax #One time #settlement # property tax #arrears
ಬೆಂಗಳೂರು: ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ One Time Settlement ಯೋಜನೆಯನ್ನು ಸರಕಾರ ಜಾರಿಗೆ ತಂದಿದೆ ಎಂದು ಬಿಬಿಎಂಪಿ(BBMP) ತಿಳಿಸಿದೆ.ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಶೇ.50ರಷ್ಟು ದಂಡ ಹಾಗೂ ಬಡ್ಡಿಮನ್ನಾ ಮಾಡಿ ‘ಒನ್ ಟೈಮ್ ಸೆಟ್ಲ್‌ಮೆಂಟ್’ (OTS) ಯೋಜನೆಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಪ್ರಕಟಿಸಿದೆ.ಈ ಯೋಜನೆಯಿಂದ ನಗರ ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಸೇರಿದಂತೆ 13- 15 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ಯೋಜನೆ ಅನುಕೂಲ ಪಡೆಯುವುದಕ್ಕೆ ಜುಲೈ 31ರವರೆಗೆ ಗಡುವು ನೀಡಲಾಗಿದೆ.OTS ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಫ್ಟ್‌ವೇರ್‌ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಎಲ್ಲಾ ನಾಗರಿಕರು ಈಗ ಓಟಿಎಸ್‌ನ ಸಂಪೂರ್ಣ 5 ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಈ ಪಾವತಿಸಬಹುದಾಗಿದೆ. ಪಾಲಿಕೆಯ ಅಧಿಕೃತ https://bbmptax.karnataka. ದ gov.inಗೆ ಭೇಟಿ ನೀಡಿ, ಓಟಿಎಸ್‌ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.ಆಸ್ತಿ ತೆರಿಗೆ, ದಂಡ ಮತ್ತು ಬಡ್ಡಿ ಪಾವತಿ ಮಾಡಿದವರಿಗೆ ಮರು ಪಾವತಿ ಹಾಗೂ ಮುಂದಿನ ಸಾಲಿನಲ್ಲಿ ಹೊಂದಾಣಿಕೆ ಇರುವುದಿಲ್ಲ. ಸದ್ಯ ನೋಟಿಸ್ ನೋಡಿದವರಿಗೆ ಹಾಗೂ ಸಂಪೂರ್ಣವಾಗಿ ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಈ ವಿನಾಯಿತಿ ದೊರೆಯಲಿದೆ ಎಂದು ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ