ಬೆಂಗಳೂರು, ಜು. 10 :ಜು.10 ರಂದುರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ನಿರ್ಧರಿಸಿದೆ.ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ಸಿದ್ದರಾಗಿದ್ದಾರೆ,ಆಶಾ ಕಾರ್ಯಕರ್ತರ ಗೌರವಧನ 5 ರಿಂದ 8 ಸಾವಿರಕ್ಕೆ ಹೆಚ್ಚಿಸಬೇಕೆಂದು ರಾಜ್ಯಸರ್ಕಾರಕ್ಕೆ ಆಶಾ ಕಾರ್ಯಕರ್ತರ ಸಂಘ ಆಗ್ರಹಿಸಿದೆ.ಸಿದ್ದರಾಮಯ್ಯಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಳ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರ ಸೇವೆಯನ್ನು ಪರಿಗಣಿಸಿ ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಅಂಗನವಾಡಿ, ಬಿಸಿಯೂಟ, ಆಶಾ ನೌಕರರಿಗೆ ವಾರ್ಷಿಕ ಸಾವಿರ ರೂ. ಗೌರವ ಧನ ಹೆಚ್ಚಳ ಮಾಡಿಲ್ಲ. ನೂತನ ಸರ್ಕಾರ ಈ ಹಣ ಪಾವತಿಸಬೇಕು ಎಂದು ಸಿಐಟಿಯು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ತಿಳಿಸಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ನಾಲ್ಕು ವರ್ಷಗಳ ಹಿಂದೆ ನೀಡಿರುವ 63 ಸಾವಿರ ಮೊಬೈಲ್‌ಗಳು ಹಳತಾಗಿರುವ ಮೊಬೈಲ್ ಬದಲಾಗಿ ಟ್ಯಾಬ್ಲೆಟ್ ನೀಡಬೇಕು.
ಪೋಷಣ್ ಅಭಿಯಾನದಡಿ ಅಂಗನವಾಡಿ ಕೇಂದ್ರಗಳಿಗೆ 6331 ಮೊಬೈಲ್ ನೀಡಿ 4 ವರ್ಷವಾಗಿದ್ದು ಇವುಗಳು ಹಳತಾಗಿದ್ದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.ವಿವಿಧ ಕೆಲಸಗಳಿಗಾಗಿ ಸರ್ಕಾರ ನೀಡಿರುವ ಮೊಬೈಲ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ನಾಳೆ ಮುಷ್ಕರ ನಡೆಸಲು ಸಿದ್ಧತೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನ ಮೊಬೈಲ್ ನಲ್ಲೇ ಮಾಡಬೇಕಿದೆ. ಸರ್ಕಾರ 4 ವರ್ಷದ ಹಿಂದೆ ನೀಡಿರುವ ಮೊಬೈಲ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದಿರುವ ಅಂಗನವಾಡಿ ಕಾರ್ಯಕರ್ತೆಯರು, 62,000 ಮೊಬೈಲ್ ಸೆಟ್ ಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದಾರೆ. ಎನ್ನಲಾಗಿದೆ.