ಬೆಂಗಳೂರು;ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಪಾಲಿಕೆ ಕಾಮಗಾರಿ ವಿಭಾಗದಿಂದ ಕೆಆರ್‌ಐಡಿಎಲ್(KRIDL) ಸಂಸ್ಥೆಗೆ ಕೋಟ್ಯಂತರ ರುಪಾಯಿ ಮೊತ್ತದ ಕಾಮಗಾರಿಗಳನ್ನು ನೀಡಲಾಗಿತ್ತು. ಕೆಆರ್‌ಐಡಿಎಲ್ ಸಂಸ್ಥೆಯಿಂದ ಗುತ್ತಿಗೆ ಪಡೆದು .200 ಕೋಟಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಕಾಮಗಾರಿ ಮುಗಿದು ಮೂರು ವರ್ಷ ಕಳೆದರೂ ಬಿಬಿಎಂಪಿ(BBMP) 120ಕ್ಕೂ ಹೆಚ್ಚಿನ ಗುತ್ತಿಗೆದಾರರಿಗೆ ಬಿಲ್ ಪಾವತಿಸದೆ ಸತಾಯಿಸುತ್ತಿದೆ. ಕೂಡಲೇ ಬಾಕಿ ಬಿಲ್ ಪಾವತಿಸದಿದ್ದಲ್ಲಿ ಆತ್ಮಹತ್ಯೆ ಅನಿವಾರ್ಯವಾಗುತ್ತದೆ. ಇದಕ್ಕಾಗಿ ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆಯುವುದಾಗಿ ಎಚ್ಚರಿಸಿದರು.
ಗುತ್ತಿಗೆದಾರ ಪ್ರತಾಪ್ ಬಿ ಕೆಆರ್‌ಐಡಿಎಲ್ ವಿರುದ್ಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಿಬಿಎಂಪಿಯು ನೆಪವಾಗಿಟ್ಟುಕೊಂಡು ಪಾವತಿ ತಡ ಮಾಡುತ್ತಿದೆ,ನಿಯಮಾನುಸಾರ ಕಾಮಗಾರಿಗಳ ಗುಣಮಟ್ಟಪರೀಕ್ಷೆ ನಡೆದಿದ್ದು,ಬಿಲ್‌ಗಳನ್ನುಆನ್‌ಲೈನ್ ಮುಖಾಂತರ ಪಾವತಿಸಲಾಗಿದೆ,ಕಡತಗಳು ಹಾಗೂ ಕಾಮಗಾರಿಗಳ ಸ್ಥಳ ಪರಿಶೀಲನೆ ಕಾರ್ಯವೂ ಮುಗಿದಿದೆ ಆದರೂ ಬಿಲ್ ಪಾವತಿಯಾಗಿಲ್ಲಈ ಕುರಿತು ಅಧಿಕಾರಿಗಳನ್ನುಕೇಳಿದರೆ ಹೈಕೋರ್ಚ್‌ನಲ್ಲಿ ಕೆಆರ್‌ಐಡಿಎಲ್ ಸಂಸ್ಥೆ ವಿರುದ್ಧ ಪ್ರಕರಣ ದಾಖಲಾಗಿ ವಿಚಾರಣೆ ನಡೆಯುತ್ತಿದೆ ಎನ್ನುತ್ತಾರೆ,ಆದರೆ ಗುತ್ತಿಗೆ ಹಣಬಿಡುಗಡೆ ಮಾಡದಂತೆ ಯಾವುದೇ ಸೂಚನೆ ಇಲ್ಲ.ಹೀಗಾಗಿ ಕೂಡಲೇ ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸುವಂತೆ ಪಾಲಿಕೆಯನ್ನು ಕೇಳಿಕೊಂಡಿದ್ದ್ದಾರೆ.120ಕ್ಕೂ ಹೆಚ್ಚು ಗುತ್ತಿಗೆದಾರರಿಗೆ 200 ಕೋಟಿ ರೂಪಾಯಿಗಳ ಪಾವತಿ ಹಲವು ವರ್ಷಗಳಿಂದ ಬಾಕಿಯಿರುವುದರಿಂದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ನಮ್ಮನ್ನು ಬಂಧಿಸಿದ್ದಾರೆ.
ಬಿಬಿಎಂಪಿ ಮತ್ತು ಕೆಆರ್‌ಐಡಿಎಲ್ ಎರಡೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿವಾದಿಗಳಾಗಿದ್ದು, ನ್ಯಾಯಾಲಯ ಯಾವುದೇ ಆದೇಶ ನೀಡುವವರೆಗೆ ಪಾಲಿಕೆ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಪಾವತಿ ಮಾಡುವಂತೆ ಪಾಲಿಕೆಗೆ ನ್ಯಾಯಾಲಯ ಸೂಚಿಸಿದರೆ ನಾವು ನೀಡುತ್ತೇವೆ ಎಂದು ಹೇಳಿದರು.