Revenue Facts

ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್ ದಿನೇಶ್ ಕುಮಾರ್ ನೇಮಕ

#PS Dinesh Kumar #appointed # Chief Justice

ಬೆಂಗಳೂರು;ಕರ್ನಾಟಕ ಹೈಕೋರ್ಟ್‌ನ(Highcourt) ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್ ದಿನೇಶ್ ಕುಮಾರ್(PS Dinesh Kumar) ಅವರು ನೇಮಕಗೊಂಡಿದ್ದಾರೆ. ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌(Supremecourt)ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ಹಿನ್ನಲೆ ಅವರ ಸ್ಥಾನಕ್ಕೆ ನ್ಯಾ. ಪಿ ಎಸ್ ದಿನೇಶ್ ಕುಮಾರ್ ನೇಮಕ ಮಾಡಲಾಗಿದೆ. 27 ವರ್ಷಗಳ ನಂತರ ಕರ್ನಾಟಕದಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿ ಸೇವೆ ಸಲ್ಲಿಸಿ ಸಿಜೆ(CJ)ಯಾಗಿ ಪದೋನ್ನತಿ ಪಡೆದ ಮೊದಲ ಕನ್ನಡಿಗರಾಗಿದ್ದಾರೆ.ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದಾರೆ.ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಹಂಗಾಮಿ ಸಿಜೆಯಾಗಿ ನೇಮಕಗೊಂಡಿದ್ದರು,ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.

Exit mobile version