21.1 C
Bengaluru
Monday, December 23, 2024

ಪಿಎಸ್‌ಐ ನೇಮಕಾತಿ: ವಿಚಾರಣೆಯನ್ನ ಆ.16 ಕ್ಕೆ ಮುಂದೂಡಿದ ಹೈಕೋರ್ಟ್

#PSI #recruitment #exam #highcourt

ಬೆಂಗಳೂರು;ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆ ಮರು ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.16ಕ್ಕೆ ಮುಂದೂಡಿದೆ.ಈ ಸಂಬಂಧ ಬೆಂಗಳೂರಿನ ಎನ್ ವಿ ಚಂದನ್ ಸೇರಿದಂತೆ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ 100 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದರು. ಇದೇ ವೇಳೆ ಅಡ್ವಕೇಟ್ ಜನರಲ್ ಕೆ.ಶಶಿ ಕಿರಣ್ ಶೆಟ್ಟಿ ಅವರೂ, ಅರ್ಜಿಯನ್ನು ಇದೇ 16ರಂದು ವಿಚಾ ರಣೆಗೆ ನಿಗದಿಪಡಿಸುವಂತೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು.

Related News

spot_img

Revenue Alerts

spot_img

News

spot_img