22 C
Bengaluru
Sunday, December 22, 2024

ಡಿವೈಎಸ್ ಪಿ ಶಾಂತಕುಮಾರ್ ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ

Psi recruitment scam : ಬೆಂಗಳೂರು, ಜ. 12 : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿರುವ ಡಿವೈಎಸ್ ಪಿ ಶಾಂತಕುಮಾರ್ ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ.

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿರುವ ಶಾಂತಕುಮಾರ್ , ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಿತು. 23 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾ. ಲಕ್ಷ್ಮೀ ನಾರಾಣಯಣ ಭಟ್ ಅವರು ಶಾಂತ ಕುಮಾರ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದರು.

ಪಿಎಸ್ ಐ ನೇಮಕಾತಿ ಅಕ್ರಮ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಪರೀಕ್ಷೆ ಅಕ್ರಮದಲ್ಲಿ ಎಡಿಜಿಪಿ ಅಮೃತ ಪೌಲ್ ಸೇರಿದಂತೆ ಸರ್ಕಾರಿ ಅಧಿಕಾರಿಗಳು ಬಂಧನಕ್ಕೆ ಒಳಗಾಗಿದ್ದರು. ಸಿಐಡಿ ಪೊಲೀಸರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Related News

spot_img

Revenue Alerts

spot_img

News

spot_img