20.8 C
Bengaluru
Thursday, December 5, 2024

ಪಿಎಸ್​​ಐ ನೇಮಕಾತಿ ಹಗರಣ: ತನಿಖೆಗೆ ಆಯೋಗ ರಚಿಸಿದ ಸರ್ಕಾರ

ಬೆಂಗಳೂರು;ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಏಕ ಸದಸ್ಯತ್ವ ಸಮಿತಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಹೇಳಿದರು.545 ಪೊಲೀಸ್ ಸಬ್-ಇನ್ಸ್‌ಪೆಕ್ಟರ್, ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಬಹು ಆಯಾಮದ ಆಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪ್ರಕರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ .ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ | ರನ್ವಯ ಮಾನ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು Baxter barbados Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಬಿ. ವೀರಪ್ಪ, ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.

ಈ ಕೆಳಗಿನ ಅಂಶಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಆಯೋಗವನ್ನು ಕೋರಲಾಗಿದೆ:

  1. ಪಿಎಸ್‌ಐಗಳ ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ?
  2. ಮೇಲಿನ ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ ಅಂತಹ ಉಲ್ಲಂಘನೆ: ಅಕ್ರಮಗಳು ಯಾವುವು ಮತ್ತು ಆ ಅಕ್ರಮಗಳು ಯಾವ ಹಂತದಲ್ಲಿ ಜರುಗಿವೆ?

3.ಮೇಲಿನ ಅಕ್ರಮಗಳಲ್ಲಿ ಭಾಗಿಗಳಾಗಿ ದುರ್ಲಾಭ ಪಡೆದಿರುವ ವ್ಯಕ್ತಿಗಳು ಯಾರು? iv. ಪಿ.ಎಸ್.ಐ ಹುದ್ದೆಗೆ ಅಭ್ಯರ್ಥಿಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು

4.ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಲೋಪರಹಿತವಾಗಿ ನಡೆಸುವ ನಿಟ್ಟಿನಲ್ಲಿ ಸರ್ಕಾರವು ಕೈಗೊಳ್ಳಬಹುದಾದ ಕ್ರಮಗಳಾವುವು?

ಮೇಲ್ಕಂಡ ಅಂಶಗಳ ಕುರಿತು ನ್ಯಾಯಾಂಗ ತನಿಖಾ ಆಯೋಗವು Commissions of Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದೆಂದು ಸರ್ಕಾರವು ಅಪೇಕ್ಷಿಸುತ್ತದೆ.Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದೆಂದು ಸರ್ಕಾರವು ಅಪೇಕ್ಷಿಸುತ್ತದೆ.

ಈ ತನಿಖಾ ಆಯೋಗಕ್ಕೆ ಸಮಗ್ರ ಮಾಹಿತಿ / ದಾಖಲೆಗಳನ್ನು ಒದಗಿಸಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಸಿಐಡಿ ಹಾಗೂ ಪೊಲೀಸ್ ನೇಮಕಾತಿ ವಿಭಾಗಗಳು ಸಹಕರಿಸತಕ್ಕದ್ದು. ಆಯೋಗವು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಕಛೇರಿಗೆ ಸ್ಥಳಾವಕಾಶ, ಮಾನ್ಯ ಏಕಸದಸ್ಯ ಆಯೋಗದ ಮಾನ್ಯ ನ್ಯಾಯಾಧೀಶರಿಗೆ, ಅಧಿಕಾರಿ / ಸಿಬ್ಬಂದಿಗಳಿಗೆ ವಾಹನಗಳು, ಪೀಠೋಪಕರಣಗಳು ದೂರವಾಣಿ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಡಿಜಿ ಮತ್ತು ಐಜಿಪಿ ರವರು ಕ್ರಮವಹಿಸತಕದು.

Related News

spot_img

Revenue Alerts

spot_img

News

spot_img