#PSI #scam #amritpal #granted #bail
ಬೆಂಗಳೂರು, ಸೆ.25:ಪಿಎಸ್ಐ(PSI) ನೇಮಕಾತಿ ಹಗರಣ(Scam) ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್(Amrit Pal) ಅವರಿಗೆ ಕರ್ನಾಟಕ ಹೈಕೋರ್ಟ್(highcourt) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಮೃತ್ ಪಾಲ್ ಗೆ ಜಾಮೀನು(Bail) ರಾಜ್ಯ ಪೊಲೀಸ್ ಇಲಾಖೆಯ 545 ಸಿವಿಲ್ ಪೊಲೀಸ್ ಪಿಎಸ್‌ಐ(PSI) ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾನೂನು & ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಈ ವೇಳೆ 5 ಲಕ್ಷ ರೂ. ಮೌಲ್ಯದ ಬಾಂಡ್ ಹಾಗೂ ಇಬ್ಬರ ಜಾಮೀನು ಒದಗಿಸುವಂತೆ ಸೂಚಿಸಿರುವ ಕೋರ್ಟ್, ಸಾಕ್ಷಿಗಳ ಮೇಲೆ ಪರಿಣಾಮ ಬೀರದಂತೆ ಹಾಗೂ ಒಪ್ಪಿಗೆ ಇಲ್ಲದೆ ವಿದೇಶ ಪ್ರಯಾಣ ಕೈಗೊಳ್ಳದಂತೆ ಎಚ್ಚರಿಕೆ ನೀಡಿದೆ.2021ರ ಅಕ್ಟೋಬರ್ 3ರಂದು 545 PSIಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಲಿಂಗ್(Rigling) ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.