Revenue Facts

PSI ಹಗರಣ, ಇಂದು ಹೈಕೋರ್ಟ್‌ ತೀರ್ಪು

#PSI #scam #High Court #verdict #today

ಬೆಂಗಳೂರು ನ 10:ಬಿಜೆಪಿ ಅಧಿಕಾರದ ಅವಧಿಯಲ್ಲಿ PSI ನೇಮಕಾತಿ ಹಗರಣದ(PSI Recrutment scam) ಆರೋಪಕ್ಕೆ ಸಂಬಂಧಿಸಿ ಇಂದು ಕರ್ನಾಟಕ ಹೈಕೋರ್ಟ್(highcourt) ಮಹತ್ವದ ಆದೇಶ ಪ್ರಕಟಿಸಲಿದೆ. ಸರ್ಕಾರದ ಆದೇಶ ರದ್ದು ಕೋರಿ ಎನ್ ವಿ ಚಂದನ್ ಸೇರಿದಂತೆ ಪಿಎಎಸ್​ಐ(PSI) ಆಯ್ಕೆ ಪಟ್ಟಿಯಲ್ಲಿ ಹೆಸರುದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ (Disputed applications)ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು(judgment) ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿಎಸ್ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಮಧ್ಯಾಹ್ನ ತೀರ್ಪು ನೀಡಲಿದೆ.ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ (Appointment order)ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಾಹ್ನ 1.25ಕ್ಕೆ ಪ್ರಕಟಿಸಲಿದೆ.ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ ಎಸ್‌ ರಾಜಗೋಪಾಲ, ಡಿ ಆರ್‌ ರವಿಶಂಕರ್‌, ಕೆ ಎನ್‌ ಫಣೀಂದ್ರ, ವಕೀಲ ಸಂತೋಷ್‌ ಕುಮಾರ್‌ ನಗರ್ಲೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದರು.ಪಿಎಸ್​ಐ (PSI)ಅಭ್ಯರ್ಥಿಗಳು ಇಂದು ಹೈಕೋರ್ಟ್ ನೀಡುವ ಮಹತ್ವದ ತೀರ್ಪಿಗಾಗಿ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ತೀರ್ಪಿನ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Exit mobile version