21 C
Bengaluru
Friday, October 25, 2024

ರೈತ ಶಕ್ತಿ ಯೋಜನೆಗೆ, ಜನವರಿ 31ರಂದು ಸಿಎಂ ಚಾಲನೆ

ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ “ರೈತ ಶಕ್ತಿ’ ಯೋಜನೆಗೆ ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮೈದಾನದಲ್ಲಿ ತೆರೆದ ಜೀಪಿನಲ್ಲಿ ಕವಾಯತು ತಂಡಗಳ ಬಳಿ ಸಾಗಿ, ಗೌರವವಂದನೆ ಸ್ವೀಕರಿಸಿದರು. ನಂತರ ಗಣರಾಜ್ಯೋತ್ಸವದ ಸಂದೇಶ ನೀಡುವ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಿದ ಸಚಿವರು, ಸಂವಿಧಾನ ರಚನೆ ಪೂರ್ಣಗೊಳಿಸಲು 2 ವರ್ಷ 11 ತಿಂಗಳು ಬೇಕಾಯಿತು. ಈ ಸಂವಿಧಾನ 1950 ಜನವರಿ 26 ರಂದು ಜಾರಿಗೆ ಬಂದಿತು. ಇದರ ನೆನಪಿಗಾಗಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಅಚರಣೆ ಮಾಡಲಾಗುತ್ತಿದೆ. ನಮ್ಮದು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ, ಇಲ್ಲಿ ಪ್ರಜೆಗಳು ಆಳುವವರನ್ನು ಆಯ್ಕೆ ಮಾಡುತ್ತಾರೆ. ಈ ಮೂಲಕ ಪ್ರಜೆಗಳೇ ಸ್ವತಃ ಆಡಳಿತ ನಡೆಸುವ ಮಾದರಿ ದೇಶದಲ್ಲಿದೆ ಎಂದ ಸಚಿವರು, ವೀರ ಸಂಗೊಳ್ಳಿ ರಾಯಣ್ಣ ಒಬ್ಬ ದೇಶಭಕ್ತ, ಇಂತಹ ವೀರಯೋಧ ಬಲಿದಾನಗೊಂಡ ದಿನವೂ ಇದಾಗಿದೆ ಎಂದು ಸಂಗೊಳ್ಳಿ ರಾಯಣ್ಣರನ್ನು ಕೂಡ ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಯೋಜನೆಯಲ್ಲಿ ಏನೇನಿದೆ?

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ ಅವಲಂಬಿತವಾ ಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆ ಜಾರಿಗೆ ತರಲಾಗುತ್ತಿದೆ.ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಹೊರೆ ಇಳಿಸಲು ರೈತ ಶಕ್ತಿ ಯೋಜನೆ ಜಾರಿಯಾಗಲಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ ರೈತ ಶಕ್ತಿ ಯೋಜನೆ’ ಸಾಕಷ್ಟು ಅನುಕೂಲವಾಗಿದೆ‌. ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್‌ಗೆ ಸಹಾಯ ಧನವನ್ನು ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ.

ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ರೈತ ಮಕ್ಕಳಿಗೆ ನೀಡುವ ರೈತನಿಧಿ ವಿದ್ಯಾರ್ಥಿ ವೇತನವನ್ನು ರೈತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡುವರು. ಡಾ.ಎಸ್.ವಿ. ಪಾಟೀಲ ಫೌಂಡೇಶನ್ ಉದ್ಘಾಟಿಸುವರು.ಸ್ವಾಮಿ ವಿವೇಕಾನಂದ ಯುವ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‍ನ ಯುವ ಸಂಘಗಳಿಗೆ ತಲಾ 05 ಲಕ್ಷ ರೂ. ಪ್ರೋತ್ಸಾಹಧನ ನೀಡುವ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ ವಿ.ವಿ ಗಳಲ್ಲಿ ರೈತರ ಮಕ್ಕಳಿಗೆ ಶೇ.50 ರಷ್ಟು ಸ್ಥಾನ ಮೀಸಲಿಡಲಾಗಿದೆ. ಹೆಣ್ಣು ಮಕ್ಕಳಿಗಾಗಿ ಸ್ತ್ರೀಸಾಮಥ್ರ್ಯ ಯೋಜನೆ ಜಾರಿಗೆ ಬರಲಿದ್ದು, ಪ್ರತಿ ಸಂಘಕ್ಕೆ 05 ಲಕ್ಷ ರೂಚಿತ್ರದುರ್ಗ ಜಿಲ್ಲೆಯಲ್ಲಿ 200 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ರೈತರಿಗೆ ಪಹಣಿ ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗುವುದು. ಆರೋಗ್ಯ ಸೇವೆ ಜನರಿಗೆ ತಲುಪಿಸಲು ನಮ್ಮ ಕ್ಲಿನಿಕ್ ತೆರೆಯಲಾಗಿದೆ.

Related News

spot_img

Revenue Alerts

spot_img

News

spot_img