Revenue Facts

ರಾಜಸ್ಥಾನ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನೀಡಿದ ಭರವಸೆಗಳೇನು?

#Rajasthan #Assembly Elections # promises made # Congress

ಜೈಪುರ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಕಾಂಗ್ರೆಸ್​ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಪ್ರಣಾಳಿಕೆ(Manifesto) ಬಿಡುಗಡೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ, ಸಿಪಿ ಜೋಶಿ, ಸಚಿನ್ ಪೈಲಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಈ ವೇಳೆ ಕಾಂಗ್ರೆಸ್ ಬಿಜೆಪಿ ಮತ್ತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು .ಜತೆಗೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ರೈತರು, ಯುವಕರು, ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ರಾಜಸ್ಥಾನದಲ್ಲಿ ನವೆಂಬರ್ 25ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

Important points of congress Manifesto

*ಸದ್ಯ 500 ರೂ.ಗೆ ಸಿಗುವ ಗ್ಯಾಸ್ ಸಿಲಿಂಡರ್ ಬೆಲೆ 400 ರೂ.

*ಚಿರಂಜೀವಿ ವಿಮೆ ಮೊತ್ತವನ್ನು 25 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲಾಗುವುದು.

*ರಾಜ್ಯದಲ್ಲಿ ಸುಮಾರು 4 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದು

*ರಾಜ್ಯದಲ್ಲಿ ಆರ್‌ಟಿಇ ಕಾನೂನು ತರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು.

*ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಉದ್ಯೋಗಗಳ ಹೊಸ ಕೇಡರ್ ಅನ್ನು ರಚಿಸಲಾಗುವುದು.

*ಸರ್ಕಾರಿ ನೌಕರರಿಗೆ ನಾಲ್ಕನೇ ವೇತನ ಶ್ರೇಣಿಯನ್ನು 9,18,27 ಮತ್ತು ಅಧಿಕಾರಿಗಳಿಗೆ ಅಪೆಕ್ಸ್ ಸ್ಕೇಲ್ ನೀಡಲಾಗುವುದು.

*ಸ್ವಾಮಿನಾಥನ್‌ ಸಮಿತಿ ವರದಿ ಅನ್ವಯ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕಾನೂನು ರೂಪಿಸುವುದು

*ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಜಾತಿಗಣತಿ ಮಾಡಲಾಗುವುದು

*ಗ್ರಾಮ ಮತ್ತು ನಗರ ವಾರ್ಡ್‌ಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

*ವಸತಿ ಹಕ್ಕು ಕಾಯಿದೆ ತರುವ ಮೂಲಕ ಎಲ್ಲರಿಗೂ ವಸತಿ ನೀಡಲಾಗುವುದು

*MNREGA ಮತ್ತು ಇಂದಿರಾ ಗಾಂಧಿ ನಗರ ಉದ್ಯೋಗವನ್ನು 125 ರಿಂದ 150 ದಿನಗಳಿಗೆ ಹೆಚ್ಚಿಸಲಾಗುವುದು

*ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿಕಾರರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡಲು ಮರ್ಚೆಂಟ್ ಕ್ರೆಡಿಟ್ ಕಾರ್ಡ್ ಯೋಜನೆ ಆರಂಭಿಸಲಾಗುವುದು.

*100 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳು ಮತ್ತು ಕುಗ್ರಾಮಗಳು ರಸ್ತೆಯ ಮೂಲಕ ಸಂಪರ್ಕಗೊಳ್ಳುತ್ತವೆ.

Exit mobile version