21.4 C
Bengaluru
Tuesday, December 24, 2024

Ram Mandir:ರಾಮ ಭಕ್ತರಿಗೆ ಗುಡ್​ ನ್ಯೂಸ್;ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ

ಬೆಂಗಳೂರ;ಅಯೋಧ್ಯೆಯಲ್ಲಿ ನೂತನ ರಾಮಮಂದಿರ(Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಇದರ ನಡುವೆ ಈಗ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ(Department of Religious Endowments) ರಾಮ ಭಕ್ತರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಅಯೋಧ್ಯೆಯಲ್ಲಿ(Ayodhya) ಶ್ರೀರಾಮ ಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ(Karnataka Yatri Niwas) ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶಕ್ಕೆ ಪತ್ರ ಬರೆದಿದೆ. ಧಾರ್ಮಿಕ ದತ್ತಿ ಇಲಾಖೆ ರಾಮ ಭಕ್ತರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶಕ್ಕೆ ಪತ್ರ ಬರೆದಿದೆ. ರಾಜ್ಯದಿಂದ ಬರುವ ಯಾತ್ರಾರ್ಥಿಗಳಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಮನವಿ ಮಾಡಲಾಗಿದೆ.ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಈಗಾಗಲೇ ಸಿಎಂ ಸಿದ್ರಾಮಯ್ಯ ಪತ್ರ ಬರೆದಿದ್ದಾರೆ.ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದು ಮನವಿ ನೀಡಲಾಗಿದೆ. 10 ಕೋಟಿ ರೂ. ವೆಚ್ಚದಲ್ಲಿ 5 ಎಕರೆ ಜಾಗದಲ್ಲಿ ಅತಿಥಿ ಗೃಹ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ಹಸಿರು ನಿಶಾನೆ ಸಿಕ್ಕರೆ ಅತಿಥಿ ಗೃಹ ನಿರ್ಮಾಣವಾಗಲಿದೆ.

Related News

spot_img

Revenue Alerts

spot_img

News

spot_img