#Randeep Singh Surjewal #important #meeting # Bangalore today
ಬೆಂಗಳೂರು;ಕರ್ನಾಟಕದಲ್ಲಿ`ನಿಗಮ ಮಂಡಳಿಗಳ ಅಧ್ಯಕ್ಷರ ನೇಮ ಕ ಕುರಿತಂತೆ ಉಂಟಾಗಿರುವ ಗೊಂದಲ ಬಗೆಹರಿಸುವ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ(Ranadeep singh surjevala) ಮಂಗಳವಾರ ನಗರಕ್ಕೆ ಆಗಮಿಸುತ್ತಿದ್ದು, ನಿಗಮ ಮಂಡಳಿ ನೇಮಕ(Appointment of corporation Board)ನಿರೀಕ್ಷೆಯಲ್ಲಿದ್ದವ ಸಂಚಲನಕ್ಕೆ ಕಾರಣವಾಗಿದೆ,ಇಂದು ಕಾಂಗ್ರೆಸ್(Congress) ನಾಯಕರ ಸಭೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಇಂದು ಬೆಂಗಳೂರಿನಲ್ಲಿ(Banglore) ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ’ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ನಿಗಮ ಮಂಡಳಿಯಲ್ಲಿ ಮಂತ್ರಿ ಪಟ್ಟ ಸಿಗದ 25 ಶಾಸಕರಿಗೆ ಅವಕಾಶ ನೀಡಬೇಕೆಂದು ಸಿಎಂ ಬಯಸಿದರೆ, ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಡಿಕೆಶಿ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಸ್ಥಾನ ತಪಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ನಿರ್ಣಾಯಕ ಹುದ್ದೆಗಳ .ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಿಗಿಂತ ಹೆಚ್ಚು ಸಮಯ ಕಳೆದಿದ್ದು, ಮಂತ್ರಿ ಸ್ಥಾನ ತಪ್ಪಿದ ಪಕ್ಷದ ಹಲವಾರು ಶಾಸಕರು ಶೀಘ್ರವೇ ಸಭೆ ನೇಮಕಾತಿ ಮಾಡುವಂತೆ ರಾಜ್ಯ ನಾಯಕರ ಹೆಸರನ್ನು ಮೇಲೆ ಒತ್ತಡ ಹೇರುತ್ತಿದ್ದಾರೆ. ನವೆಂಬರ್ 1 ರಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ನಗರಕ್ಕೆ ಹಠಾತ್ ಭೇಟಿ ನೀಡಿದ ಸುರ್ಜೆವಾಲಾ ಅವರು ನವೆಂಬರ್ 17 ರಂದು ಮಧ್ಯಪ್ರದೇಶದಲ್ಲಿ ಮತದಾನ ಮುಗಿದ ನಂತರ ನೇಮಕಾತಿಗಳನ್ನು ಮಾಡುವುದಾಗಿ ಪಕ್ಷದ ನಾಯಕರಿಗೆ ಭರವಸೆ ನೀಡಿದ್ದರು.ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಗಸ್ಟ್‌ನಲ್ಲಿ ಹೆಸರುಗಳನ್ನು ಅಂತಿಮಗೊಳಿಸಲು ಸಭೆ ನಡೆಸಿದ್ದರು.ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಜತೆ ಮಹತ್ವದ ಸಭೆ ನಡೆಸಿ ಕಗ್ಗಂಟಾಗಿ ಉಳಿದಿರುವ ನಿಗಮ ಮಂಡಳಿ ನೇಮಕ ಬಗ್ಗೆ ಮಾತುಕತೆ ನಡೆಸಿ ಅಂತಿಮ ಪಟ್ಟಿ ಫೈನಲ್ ಮಾಡಲಿದ್ದಾರೆ ಎನ್ನಲಾಗಿದೆ.