24.8 C
Bengaluru
Sunday, May 19, 2024

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಲ್ಲಿ  ನಡೆದ ಕಾರ್ಯಾಚರಣೆಯಲ್ಲಿ ಶಹರ ಪೊಲೀಸ್ ಠಾಣೆ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಫಿರೋಜ್ ಎಂಬುವರಿಗೆ ಮನೆ ಬಾಡಿಗೆ ವಸೂಲಿ‌ ಮಾಡಿಸಿ ಕೊಡುವ ವಿಚಾರಕ್ಕೆ ಪಿಎಸ್ಐ ಸುನೀಲ್ ತೇಲಿ ಅವರು 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ಫಿರೋಜ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಮೇರೆಗೆ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.40 ಸಾವಿರ ರೂ. ಲಂಚ ಪಡೆಯುತ್ತಿದ್ದ ಆರೋಪಿಗಳು ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್​​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿ ಸ್ಥಾನದಲ್ಲಿರುವ ಪೊಲೀಸರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Related News

spot_img

Revenue Alerts

spot_img

News

spot_img