ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇಂದು (ಜು.8) ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.ಈ ಕುರಿತ ವಿವರಗಳನ್ನು ಕೆಎಸ್‌ಎಲ್‌ಎಸ್ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ವಿವರಿಸಿ, ರಾಜ್ಯದಾದ್ಯಂತ ಒಟ್ಟು 20 ಲಕ್ಷದಷ್ಟು ಪ್ರಕರಣಗಳ ವಿಚಾರಣೆ ನಡೆಯಲಿದೆ ಎಂದರು.
ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಾರ್ವಜನಿಕರು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಎಸ್‌ಎ ಕಾರನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ತಿಳಿಸಿದ್ದಾರೆ.
ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಪ್ರಕರಣ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೀಮ್‌ಗಳು, ವೈವಾಹಿಕ ಕೌಟುಂಬಿಕ ಪ್ರಕರಣ , ಚೆಕ್ ಅಮಾನ್ಯ ಪ್ರಕರಣಗಳೂ ಸೇರಿ ರಾಜಿಯಾಗಬಲ್ಲ ಕ್ರಿಮಿನಲ್ ಹಾಗೂ ಸಿವಿಲ್ ಪ್ರಕರಣಗಳನ್ನು ಅದಾಲತ್‌ನಲ್ಲಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.