21.1 C
Bengaluru
Monday, December 23, 2024

ರೇಷನ್‌ ಕಾರ್ಡ್‌ ತಿದ್ದುಪಡಿ ಗಡುವು ಮತ್ತೆ ಅ.21ರವರೆಗೂ ವಿಸ್ತರಣೆ

#Ration card #amendment #deadline # extended #till #October21st

ಬೆಂಗಳೂರು: ಬಿಪಿಎಲ್(BPL) ಹಾಗೂ ಎಪಿಎಲ್(APL)  ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿ ಮತ್ತ ತಿದ್ದುಪಡಿ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡಲಾಗಿದೆ.ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಹೆಚ್ಚಿನ ಸಮಯ ನೀಡುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಸಮಯವನ್ನು ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಅಕ್ಟೋಬರ್‌ 5 ರಿಂದ 13ರವರೆಗೂ ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ತಿದ್ದುಪಡಿಗೆ ಸಾಕಷ್ಟು ಕಡೆಗಳಲ್ಲಿ ಸರ್ವರ್‌ ಸಮಸ್ಯೆ ಎದುರಾದ ಹಿನ್ನೆಲೆ ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆಯು ಈ ಕ್ರಮ ಕೈಗೊಳ್ಳಿದೆ. ಸೋಮವಾರ ಈ ಬಗ್ಗೆ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಬಾರಿ ಬೆಂಗಳೂರಿನಲ್ಲಿ ತಿದ್ದುಪಡಿಗೆ ಅವಕಾಶವಿಲ್ಲ. ಜಿಲ್ಲೆ ತಿದ್ದುಪಡಿಗೆ ಹೆಚ್ಚಿನ ಸಮಯ ಕೋರಿ ಬಂದ 10 ಜಿಲ್ಲೆಗಳಿಗೆ ಮಾತ್ರ ಅವಕಾಶ ನೀಡಿದೆ.

ಯಾವ ಯಾವ ಜಿಲ್ಲೆಗಳಿಗೆ ತಿದ್ದುಪಡಿ ವಿಸ್ತರಣೆ?
ಅಕ್ಟೋಬರ್‌ 16, 17 ಮತ್ತು 18 ರಂದು ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ ಮಾಡಿಕೊಳ್ಳಬಹುದಾಗಿದೆ.

ಅಕ್ಟೋಬರ್‌ 19,20, 21ರಂದು ದಾವಣಗೆರೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶವಿದೆ.

Related News

spot_img

Revenue Alerts

spot_img

News

spot_img