Revenue Facts

Ration card: ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ

Ration card: ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ

ಬೆಂಗಳೂರು: ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ಮತ್ತಷ್ಟು ದಿನ ಕಾಲಾವಕಾಶ ನೀಡಿದೆ.ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರಿಸಲು ಸೆ.9 ರಿಂದ 14ರವರೆಗೆ ಆಹಾರ ಇಲಾಖೆ ಕಾಲಾವಕಾಶ ನೀಡಿದೆ.ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವರ್‌ ನಲ್ಲಿಸಮಸ್ಯೆ ಕಾಣಿಸಿಕೊಂಡಿದೆ.1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವ‌ರ್ ಸಮಸ್ಯೆ ಎದುರಾಗಿತ್ತು.ಮನೆ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರು ಇಲ್ಲ ಎಂದು ಗೃಹಲಕ್ಷ್ಮೀ ಅರ್ಜಿ ಹಾಕಿಲ್ಲ ಎನ್ನುವವರಿಗೆ ಸದ್ಯ ಅವಕಾಶ ನೀಡಲಾಗಿದ್ದು, ಮಹಿಳೆಯೊಬ್ಬರನ್ನು ಮನೆ ಯಜಮಾನಿ ಎಂದು ತಿದ್ದುಪಡಿ ಮಾಡಬಹುದು.ಈ ಹಿಂದೆಯೇ BPL ತಿದ್ದುಪಡಿಗೆ ಅವಕಾಶ ನೀಡಿದ್ದ ಸರ್ಕಾರ, ಈಗ ಅವಧಿಯನ್ನು ಮತ್ತೆ ವಿಸ್ತರಿಸಿದೆ. ಮೊದಲು ಸರ್ವರ್ ಬ್ಯುಸಿ ಆಗುತ್ತಿದ್ದುದರಿಂದ ತೊಂದರೆಯಾಗಿತ್ತು. ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೀದರ್, ಕೋಲಾರ, ರಾಯಚೂರು, ರಾಮನಗರ, ಶಿವಮೊಗ್ಗ ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಫಲಾನುಭವಿಗಳು ಸೆ.6 ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು.ತಿದ್ದುಪಡಿಗೆ ಅವಕಾಶ ನೀಡಿರುವ ದಿನಗಳಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸೆ.9 ರಿಂದ 11ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು, ಸೆ.12 ರಿಂದ 14ರವರೆಗೆ ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.ತಿದ್ದುಪಡಿಗೆ ಅವಕಾಶ ನೀಡಿರುವ ದಿನಗಳಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಪಂ ಕಚೇರಿ, ಗ್ರಾಮ್‌ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಮೇಲ್ಕಾಣಿಸಿದ ದಿನಾಂಕಗಳ೦ದು ಆಯಾಯ ಜಿಲ್ಲೆಯ ರೇಷನ್ ಕಾರ್ಡ್’ದಾರರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ಈ ಕೆಳಕಂಡ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

*ಫಲಾನುಭವಿ ಹೆಸರು ಬದಲಾವಣೆ

*ಕಾರ್ಡ್ ಸದಸ್ಯರ ಹೆಸರು ತೆಗೆದು ಹಾಕುವುದು, ಸೇರ್ಪಡೆ ಮಾಡುವುದು

*ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ

*ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯ ಸ್ಥಾನ ಬದಲಾವಣೆ

Exit mobile version