#Re-examination # 545 #PSI posts # 23rd January
ಬೆಳಗಾವಿ: ಡಿ. 23ಕ್ಕೆ ನಿಗದಿಯಾಗಿದ್ದ ಪಿಎಸ್ಐ(PSI) ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ.ಪಿಎಸ್‌ಐ ಹುದ್ದೆ ಪರೀಕ್ಷೆ ಡಿಸೆಂಬರ್ 23ರ ಬದಲಾಗಿ ಜನವರಿ 23ರಂದು ನಡೆಯಲಿದೆ.ಸೋಮವಾರ ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಈ ವಿಷಯವನ್ನು ಪ್ರಕಟಿಸಿದರು.ನಿಗದಿತ ದಿನಾಂಕವನ್ನು ಮೂಂದೂಡುವಂತೆ ಬಿಜೆಪಿಯ ಬಸನಗೌಡ ಪಾಟೀಲ ಶೂನ್ಯವೇಳೆಯಲ್ಲಿ ಮನವಿ ಮಾಡಿದರು. ಪಕ್ಷಾತೀತವಾಗಿ ಎಲ್ಲ ಸದಸ್ಯರು ಮಾಡಿದ ಆಗ್ರಹಕ್ಕೆ ಮಣಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಒಂದು ತಿಂಗಳ ಕಾಲ ಮುಂದೂಡಿದರು. ಡಿ. 23ರ ಬದಲು ಮುಂದಿನ ಜನವರಿ 23ಕ್ಕೆ ನಡೆಸುವುದಾಗಿ ಘೋಷಿಸಿದರು,ಸರ್ಕಾರ 403 ಪಿ.ಎಸ್.ಐ ನೇಮಕಾತಿ ಹೊಸ ಅಧಿಸೂಚನೆ ಹೊರಡಿಸಿದೆ. 600 ಪಿ.ಎಸ್.ಐ ಗಳ ನೇಮಕಾತಿಗೆ ಹಣಕಾಸು ಇಲಾಖೆ ಮಂಜೂರು ನೀಡಿದೆ. ಈ ಎಲ್ಲಾ ಪಿ.ಎಸ್.ಐ ನೇಮಕಾತಿಗಳ ನಡುವೆ ಜೇಷ್ಠತೆ ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕೆ 545 ಪಿ.ಎಸ್.ಐ ಗಳ ನೇಮಕಾತಿಯನ್ನು ಡಿ.23 ಕ್ಕೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಟ್ಟು 54301 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.PSI ಪರೀಕ್ಷೆ ಸಮಯಾವಕಾಶ ಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಹಾಗಾಗಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.