ಬೆಂಗಳೂರು: ರಾಜ್ಯದ ಮೂರನೇ ಅತಿದೊಡ್ಡ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ(ST) ಪಟ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ(Congressgovernment) ಗುರುವಾರ ಕೇಂದ್ರ ಸರಕಾರಕ್ಕೆ ಶಿಫಾರಸು(Recommndation) ಮಾಡಿದೆ.ಕುರುಬರು ಇತರೆ ಹಿಂದುಳಿದ ವರ್ಗಗಳ ವರ್ಗದ ಅಡಿಯಲ್ಲಿ ಬರುತ್ತಾರೆ. ಲಿಂಗಾಯತರು ಮತ್ತು ಒಕ್ಕಲಿಗರ ನಂತರ ಅವರನ್ನು ಪ್ರಬಲ ಹಿಂದುಳಿದ ವರ್ಗವಾಗಿ ಕುರುಬರು ರಾಜ್ಯದಲ್ಲಿ ಇದ್ದಾರೆ.
ಮೈಸೂರಿನ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆ ಈ ಸಂಬಂಧ ಸುದೀರ್ಘ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.ಆ ವರದಿ ಆಧರಿಸಿ ಸರಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ವರದಿಯಂತೆ ಕುರುಬ ಸಮುದಾಯವನ್ನು ಪರಿಶಿಷ್ಟ.ಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ವರದಿಯೊಂದಿಗೆ ಕೇಂದ್ರ ಸರಕಾರದ ಪರಿಶಿಷ್ಟ ಪಂಗಡ ವ್ಯವಹಾರಗಳ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.ಕುರುಬ ಸಮುದಾಯಗಳ ಒತ್ತಾಯದ ಮೇರೆಗೆ 2017ರಲ್ಲಿ ಆ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. 2019ರಲ್ಲಿ ಕುಲಶಾಸ್ತ್ರ ಅಧ್ಯಯನಕ್ಕೆ ಹಣ ಬಿಡುಗಡೆ ಮಾಡುವುದರೊಂದಿಗೆ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆಗೆ ವಹಿಸಲಾಗಿತ್ತು. ಇದು 2023ರ ಮಾರ್ಚ್ ನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.