Revenue Facts

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಲೋಕಾ ಶಾಕ್

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಲೋಕಾ ಶಾಕ್

ಬೆಂಗಳೂರು: ನಗರದ ಹಲವು ಆರ್‌ಟಿಒ ಅಧಿಕಾರಿಗಳಿಗೆ ಲೋಕಾಯುಕ್ತ(Lokayukta) ಶಾಕ್‌ ನೀಡಿದ್ದು, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಯಶವಂತಪುರ, ಇಂದಿರಾನಗರ, ಜಯನಗರ. ಜ್ಞಾನಭಾರತಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಆರ್ ಟಿ ಒ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಧಿಡೀರ್ ಆಗಿ ದಾಳಿ ನಡೆಸಿ ಆರ್ ಟಿ ಒ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಯಲಹಂಕ ಮತ್ತು ಯಶವಂತಪುರದ ಆರ್‌ಟಿಒ(RTO) ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.ಜಯನಗರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ(RTO) ಅವ್ಯಾಹತವಾಗಿ ನಡೆಯುತ್ತಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಗಿಂದಾಗ್ಗೆ ಲೋಕಾಯುಕ್ತ ಸಂಸ್ಥೆಯ ಗಮನ ಸೆಳೆಯುತ್ತಿದ್ದ ಮೇರೆಗೆ ಗೌರವಾನ್ವಿತ ಲೋಕಾಯುಕ್ತರು, ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆಯನ್ನು ನಡೆಸಿ, ಮಾಹಿತಿ ಸಂಗ್ರಹಿಸಿ, ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿ ಪಡಿಸಿಕೊಂಡು, ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಾಂಗ ಹಾಗೂ ಪೊಲೀಸ್ ಅಧಿಕಾರಿಗಳ ತಂಡವನ್ನು ಮಾಡಿ, ಬೆಂಗಳೂರಿನಾದ್ಯಂತ ಇರುವ ಎಲ್ಲಾ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಏಕಕಾಲದಲ್ಲಿ ದಾಳಿ ಮಾಡಿ ಅಕ್ರಮಗಳನ್ನು ಪತ್ತೆ ಹಚ್ಚುವಂತೆ ಆದೇಶಿಸಿರುತ್ತಾರೆ.

Exit mobile version