ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂ.27ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಈಗ ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದು ದೇವಿಯ ಮೊರೆ ಹೋಗಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಚಾಮುಂಡಿ ತಾಯಿಯಲ್ಲಿ ಪ್ರಚಾರ ಮಾಡಿದ್ದೆ. ನಾನು ದೇವಿಯ ಮುಂದೆ ಬೇಡಿಕೊಂಡೆ. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಹಾಗಾಗಿ ಬೆಟ್ಟಕ್ಕೆ ಬಂದು ಭೇಟಿ ಕೊಟ್ಟಿದ್ದೇನೆ ಎಂದರು.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ವಿಳಂಬವಾಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಸಿದ್ಧವಾಗಿದೆ. ಗೃಹ ಲಕ್ಷ್ಮೀ ಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 27 ರಿಂದ ಪ್ರಾರಂಭವಾಗಲಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಮಾಲೀಕರ ಖಾತೆಗೆ ಹಣ ಬರಲಿದೆ ಎಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಾವು ಗೃಹ ಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದೇವೆ. ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೂ.27ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂಗೆ ಆ್ಯಪ್ ತೋರಿಸುತ್ತೇವೆ.ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 17ರ ನಂತರ ಫಲಾನುಭವಿಗಳ ಹಣ ಜಮಾ ಮಾಡುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಯಾವುದೇ ಅರ್ಜಿ ಶುಲ್ಕವಿಲ್ಲ. ಮಧ್ಯವರ್ತಿಗಳ ಸಮಸ್ಯೆಯನ್ನು ತಪ್ಪಿಸಲು ನಾವು ಅಪ್ಲಿಕೇಶನ್ ಅನ್ನು ರಚಿಸಿದ್ದೇವೆ. ಅರ್ಜಿ ಸಲ್ಲಿಕೆಗೆ ಒಂದು ರೂಪಾಯಿ ಕೂಡ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಪಡೆದರೆ ಫಲಾನುಭವಿ ಪಟ್ಟಿಗೆ ಸೇರ್ಪಡೆಯಾಗುವುದೇ? ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು.
ಗೃಹ ಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಆರ್ಥಿಕ ತೊಂದರೆ ಇದೆ ಎನ್ನುವುದರಲ್ಲಿ ಅರ್ಥವಿಲ್ಲ. ನಮ್ಮಲ್ಲಿ ಎಲ್ಲ ರೀತಿಯ ಸಂಪನ್ಮೂಲವಿದೆ ಎಂದು ಸ್ಪಷ್ಟಪಡಿಸಿದರು.