24.2 C
Bengaluru
Friday, September 20, 2024

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಸ್ಥಗಿತ: ಪ್ರತಿಕ್ರಿಯಿಸಿದ ಡಿಕೆಶಿ

#Registration #Halted #Gruhalakshmi #Responds #DKC

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ.ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಾಯಿತ ಫಲಾನುಭವಿಗಳಿಗೆ ಮೊತ್ತ ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ. 1.28 ಕೋಟಿ ಫಲಾನುಭವಿಗಳ ಪೈಕಿ 1,13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕವ್ಯಸಿ ಅಪ್ಲೇಟ್ ಮಾಡಿಸಿಲ್ಲ ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮ ಆದ ನಂತರ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ವಾರಂಭಗೊಳ್ಳಲಿದೆ ಎಂದರು.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಮಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟ್ ಮಾಡಿದೆ.

Related News

spot_img

Revenue Alerts

spot_img

News

spot_img